ರಾಜನಿಗೆ ಸ್ವರ್ಣಗೌರಿ ವ್ರತಾ ಮಹಿಮೆ ಹೇಳಿದ ಅಪ್ಸರೆಯರು!
ರಾಜ ಸರೋವರದ ಬಳಿ ಹೋಗುತ್ತಾನೆ. ಆಗ ಅಲ್ಲಿ ಅನೇಕ ಅಪ್ಸರೆಯರು ಸ್ವರ್ಣಗೌರಿ ಪೂಜೆಯನ್ನು ಮಾಡುವುದರಲ್ಲಿ ನಿರತ...

ಪ್ರತಿ ವರ್ಷ ವಿನಾಯಕ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಮುತ್ತೈದೆಯರಿಗೆಲ್ಲಾ ಸಕಲ ಸೌಭಾಗ್ಯ ನೀಡುವ ಹಬ್ಬವಾಗಿದೆ. ಈ ಗೌರಿ ಹಬ್ಬ ಭಾದ್ರಪದ ಶುದ್ಧ ತದಿಗೆ ದಿನ ಬರುತ್ತದೆ. ಈ ಸ್ವರ್ಣ ಗೌರಿ ಪೂಜೆ ಹೇಗೆ ಆಚರಣೆಯಲ್ಲಿ ಬಂತು ಎನ್ನುವ ಕುರಿತು ಪೌರೌಣಿಕ ಹಿನ್ನಲೆ ಇದೆ.
ಚಂದ್ರಪ್ರಭ ಎಂಬ ರಾಜನು ಭೇಟೆಯಾಡಲು ಕಾಡಿಗೆ ಹೋಗುತ್ತಾನೆ. ಅಲ್ಲಿ ಒಂದು ಸುಂದರವಾದ ನೈಸರ್ಗಿಕ ಸಂಪತ್ತುಳ್ಳ ಸರೋವರ ಕಾಣಿಸುತ್ತದೆ. ಅದನ್ನು ನೋಡಿದ ರಾಜ ಸರೋವರದ ಬಳಿ ಹೋಗುತ್ತಾನೆ. ಆಗ ಅಲ್ಲಿ ಅನೇಕ ಅಪ್ಸರೆಯರು ಸ್ವರ್ಣಗೌರಿ ಪೂಜೆಯನ್ನು ಮಾಡುವುದರಲ್ಲಿ ನಿರತರಾಗಿರುತ್ತಾರೆ. ಇದನ್ನು ಕಂಡ ರಾಜನು ಪೂಜೆಯ ನಂತರ ಪೂಜೆಯ ಮಹತ್ವದ ಬಗ್ಗೆ ತಮಗೆ ತಿಳಿಸಬೇಕು ಎಂದು ಕೇಳಿಕೊಳ್ಳುತ್ತಾನೆ.
ಆಗ ಆ ಅಪ್ಸರೆಯರು ವ್ರತದ ಮಹಿಮೆ ಬಗ್ಗೆ ತಿಳಿಸುವರು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಿ ಇದನ್ನು ಭಾದ್ರಪದ ಶುದ್ಧ ತದಿಗೆ ದಿನ ಆಚರಿಸಬೇಕೆಂದು ತಿಳಿಸಿ 16 ಗಂಟು ಹಾಕಿದ ದಾರವನ್ನು ಕೊಡುತ್ತಾರೆ. ಆ ದಾರವನ್ನು ತೆಗೆದುಕೊಂಡು ಅರಮನೆಗೆ ಬಂದ ರಾಜ ತನ್ನ ಇಬ್ಬರು ಪತ್ನಿಯರಿಗೆ ಆ ದಾರವನ್ನು ಕೊಡುತ್ತಾನೆ.
ಮೊದಲನೆ ಪತ್ನಿ ಆ ದಾರವನ್ನು ತಿರಸ್ಕರಿಸಿ ಒಣಗಿದ ಗಿಡದ ಮೇಲೆ ಎಸೆಯುತ್ತಾಳೆ. ಆ ಗಿಡವು ದಾರದ ಮಹಿಮೆಯಿಂದ ತಕ್ಷಣ ಚಿಗುರಿ ಬೆಳೆಯತೊಡಗಿತು. ಅದನ್ನು ಕಂಡ ಕಿರಿಯ ಪತ್ನಿಯು ಆ ದಾರವನ್ನು ಧರಿಸಿ ರಾಜನು ಹೇಳಿದ ಕ್ರಮದಲ್ಲಿ ಸ್ವರ್ಣಗೌರಿ ವ್ರತವನ್ನು ಆಚರಿಸುತ್ತಾಳೆ.
ನಂತರ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗುತ್ತದೆ. ಕಾಲ ಕಳೆದ ಮೇಲೆ ಸತಿಪತಿಯರು ಶಿವಲೋಕವನ್ನು ಹೊಂದಿ ಮುಕ್ತಿಯನ್ನು ಪಡೆದರು ಎಂದು ಪುರಣಾಗಳು ಹೇಳುತ್ತವೆ. ಸ್ವರ್ಣಗೌರಿ ಹಬ್ಬದಲ್ಲಿ ಬಾಗಿನ ಕೊಡುವುದು ಒಂದು ವಿಶೇಷ. ಅಂದರೆ ಗೌರವಪೂರ್ಣವಾಗಿ ಕೊಡುವ ದಾನ ಅಥವಾ ಸತ್ಕಾರವೆಂದು ಕರೆಯುತ್ತಾರೆ.
ಮುತ್ತೈದೆಯರು ಸ್ವರ್ಣಗೌರಿ ವ್ರತವನ್ನು ನಿಷ್ಠೆಯಿಂದ ಆಚರಿಸಿದಲ್ಲಿ ಖಂಡಿತವಾಗಿ ಸಂತಾನ ಪ್ರಾಪ್ತಿ, ಅವಿವಾಹಿತರಿಗೆ ವಿವಾಹಯೋಗ ಮತ್ತು ವಿದ್ಯಾರ್ಥಿಗಳಿಗೆ ಜ್ಞಾನ ದೊರೆಯುತ್ತದೆ ಎನ್ನುವುದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ.
-ಮೈನಾಶ್ರೀ.ಸಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


