ತಂಬಾಕು ಉತ್ಪನ್ನಗಳ ಮೇಲೆ ಎಚ್ಚರಿಕೆಯ ದೊಡ್ಡ ಚಿತ್ರಗಳಿಗಾಗಿ ಮೋದಿ ಬ್ಯಾಟಿಂಗ್
ಪ್ರಧಾನಿ ನರೇಂದ್ರ ಮೋದಿ ಅವರು ತಂಬಾಕು ಉತ್ಪನ್ನಗಳ ಮೇಲೆ ಎಚ್ಚರಿಕೆಯ ದೊಡ್ಡ ಚಿತ್ರಗಳನ್ನು ಪ್ರಕಟಿಸಬೇಕು ಎಂದು ಅಭಿಪ್ರಾಯಪಟ್ಟಿರುವುದರಿಂದ,

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತಂಬಾಕು ಉತ್ಪನ್ನಗಳ ಮೇಲೆ ಎಚ್ಚರಿಕೆಯ ದೊಡ್ಡ ಚಿತ್ರಗಳನ್ನು ಪ್ರಕಟಿಸಬೇಕು ಎಂದು ಅಭಿಪ್ರಾಯಪಟ್ಟಿರುವುದರಿಂದ, ಬೀಡಿ, ಸಿಗರೆಟ್ ಮತ್ತು ಅಗಿಯಬಲ್ಲ ತಂಬಾಕು ಉತ್ಪನ್ನಗಳ ಡಬ್ಬಿಗಳ ೮೫% ಪ್ರದೇಶದಲ್ಲಿ ಎಚ್ಚರಿಕೆ ಚಿತ್ರವನ್ನು ಪ್ರಕಟಿಸುವಂತೆ ಸೂಚಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಶನಿವಾರ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಎಚ್ಚರಿಕೆಯ ದೊಡ್ಡ ಚಿತ್ರಗಳನ್ನು ತಂಬಾಕು ಉತ್ಪನ್ನಗಳ ಮೇಲೆ ಮುದ್ರಿಸುವ ಬಗ್ಗೆ ಮೋದಿ ಹೇಳಿರುವುದರಿಂದ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಇದಕ್ಕಾಗಿ ಸಮಿತಿಯನ್ನು ರಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ತಂಬಾಕು ಉತ್ಪನ್ನಗಳನ್ನು ಬಳಸುವುದರಿಂದ ಜನರು ಹಿಂಜರಿಯುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಬೆಂಗಳೂರಿನ ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಿದ್ದಾರೆ.
ತಂಬಾಕಿಗೂ ಕ್ಯಾನ್ಸರಿಗೂ ಸಂಬಂಧವಿದೆ ಎಂಬುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದ ಬಿಜೆಪಿ ಲೋಕಸಭಾ ಸದಸ್ಯ ದಿಲೀಪ್ ಗಾಂಧಿ ಅವರ ಹೇಳಿಕೆಯಿಂದ ಬಿಜೆಪಿ ಪಕ್ಷವನ್ನು ದೂರವಿಟ್ಟ ಜೇಟ್ಲಿ, ವೈಯಕ್ತಿಕವಾಗಿ ಜನರು ಏನು ಬೇಕಾದರೂ ಹೇಳಬಹುದು ಆದರೆ ಸರ್ಕಾರ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ತಂಬಾಕಿನ ಮೇಲೆ ಕಾನೂನು ತಿದ್ದುವ ಸಂಸದೀಯ ಸಮಿತಿಯ ಸದಸ್ಯ ಗಾಂಧಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


