ಬಾಲ್ಯದ ಆತ್ಮೀಯ ಸ್ನೇಹ ಪ್ರೌಢಾವಸ್ಥೆಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಲು ಸಹಕಾರಿ!
ಬಾಲ್ಯದಲ್ಲಿ ಆತ್ಮೀಯ ಸ್ನೇಹವನ್ನು ಹೊಂದುವುದರಿಂದ ಪ್ರೌಢಾವಸ್ಥೆಯ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದೆಂಬ ಅಂಶವನ್ನು ಹೊಸ ಸಶೋಧನೆಯೊಂದು ಬಹಿರಂಗಪಡಿಸಿದೆ.

ವಾಷಿಂಗ್ ಟನ್: ಬಾಲ್ಯದಲ್ಲಿ ಆತ್ಮೀಯ ಸ್ನೇಹವನ್ನು ಹೊಂದುವುದರಿಂದ ಪ್ರೌಢಾವಸ್ಥೆಯ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದೆಂಬ ಅಂಶವನ್ನು ಹೊಸ ಸಶೋಧನೆಯೊಂದು ಬಹಿರಂಗಪಡಿಸಿದೆ.
ವರ್ಜೀನಿಯಾದ ವಿಶ್ವವಿದ್ಯಾನಿಲಯದಲ್ಲಿ 13 - 27 ವಯೋಮಿತಿಯವರನ್ನು ಅಧ್ಯಯನಕ್ಕೆ ಒಳಪಡಿಸಿದ್ದು, ಬಾಲ್ಯದಲ್ಲಿ ಆತ್ಮೀಯ ಸ್ನೇಹವನ್ನು ಹೊಂದುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದ್ದಾರೆ. ಆತ್ಮೀಯ ಸ್ನೇಹ ಆತಂಕ ಮತ್ತು ಖಿನ್ನತೆ ಕಡಿಮೆಯಾಗುವುದರಿಂದ ಪ್ರೌಢಾವಸ್ಥೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚು ಕಾಣಿಸಿಕೊಳ್ಳುವುದಿಲ್ಲ.
ಒಂಟಿಯಾಗಿರುವುದು ಆಧುನಿಕ ಪಾಶ್ಚಿಮಾತ್ಯ ಸಮಾಜದಲ್ಲಿ ಸಾಮಾನ್ಯವಾಗುತ್ತಿದೆ. ಆದರೆ ಮಾನವೀಯ ಸಂಬಂಧಗಳನ್ನು ಕಳೆದುಕೊಳ್ಳುವುದು ಭಾರಿ ಅಪಾಯವನ್ನು ಉಂಟು ಮಾಡುತ್ತದೆ ಎಂದು ವರ್ಜಿನಿಯಾ ವಿಶ್ವವಿದ್ಯಾನಿಲಯದ ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ಅಧ್ಯಯನದ ವರದಿ ಸೈಕಾಲಜಿ ಸೈನ್ಸ್ ಗೆ ಸಂಬಂಧಿಸಿದ ಪತ್ರಿಕೆಯಲ್ಲಿ ಪ್ರಕಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


