ಸಾಮಾನ್ಯವಾಗಿ ಸೂಚಿಸಲಾಗುವ ಔಷಧಗಳಿಂದ ಮೆದುಳಿನ ಮೇಲೆ ಪ್ರತಿಕೂಲ ಪರಿಣಾಮ!
ಆರೋಗ್ಯದಲ್ಲಿ ಸಣ್ಣ ಏರುಪೇರಾದರೆ ಸಾಮಾನ್ಯವಾಗಿ ಎಲ್ಲರೂ ಒಂದೇ ರೀತಿಯ ಡೆಪ್ರೆಸೆಂಟ್(ಔಷಧ) ತೆಗೆದುಕೊಳ್ಳುವುದು ಮೆದುಳಿನ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ

ನ್ಯೂಯಾರ್ಕ್: ಆರೋಗ್ಯದಲ್ಲಿ ಸಣ್ಣ ಏರುಪೇರಾದರೆ ಸಾಮಾನ್ಯವಾಗಿ ಒಂದೇ ರೀತಿಯ ಡೆಪ್ರೆಸೆಂಟ್(ಔಷಧ) ಸೂಚಿಸುವ ರೂಢಿ ಇದೆ. ಆದರೆ ಈ ರೀತಿ ಮಾಡುವುದರಿಂದ ಮೆದುಳಿನ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಹೊಸ ಸಂಶೋಧನೆ ಎಚ್ಚರಿಸಿದೆ.
ಖಿನ್ನತೆಯೂ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಸಾಮಾನ್ಯವಾಗಿ ಸೂಚಿಸಲಾಗುವ ಔಷಧಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧನೆ ತಿಳಿಸಿದೆ. ಜೊಲೋಫ್ಟ್ ಎಂಬ ಆಂಟಿ ಡೆಪ್ರೆಸೆಂಟ್ ಖಿನ್ನತೆಗೊಳಗಾದ ಜನರಲ್ಲಿ ಮೆದುಳಿನ ಒಂದು ಪ್ರದೇಶದ ಗಾತ್ರವನ್ನು ಹೆಚ್ಚಿಸಿದರೆ, ಇದೇ ಡ್ರಗ್ ಖಿನ್ನತೆಗೊಳಗಾಗದ ವ್ಯಕ್ತಿಗಳಲ್ಲಿ ಮೆದುಳಿನ ಎರಡೂ ಭಾಗದ ಗಾತ್ರವನ್ನು ಕಡಿಮೆ ಮಾಡಿರುವುದು ಸಂಶೋಧನೆ ಮೂಲಕ ಬೆಳಕಿಗೆ ಬಂದಿದೆ.
ಖಿನ್ನತೆಯೂ ಸೇರಿದಂತೆ ಹಲವು ಕಾಯಿಲೆಗಳಿಗೆ ಜೋಲೋಫ್ಟ್ ಎಂಬ ಔಷಧವನ್ನು ಸಾಮಾನ್ಯವಾಗಿ ಸೂಚಿಸಲಾಗುತ್ತಿದೆ, ಈ ಹಿನ್ನೆಲೆಯಲ್ಲಿ ಸಂಶೋಧನೆಯಲ್ಲಿ ಬೆಳಕಿಗೆ ಬಂದಿರುವ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಶೋಧನಾ ತಂಡದಲ್ಲಿದ್ದ ಕರೋಲ್ ಶಿವೆಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


