ಸುದ್ದಿಗಳು

ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲು

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ.

ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲು
ಶ್ರೀರಾಮುಲು
Published On :

ಬಳ್ಳಾರಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಶ್ರೀರಾಮುಲು 59,478 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ ಬಿ. ನಾಗೇಂದ್ರ 84,479 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.

2018ರ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಬಿ. ಶ್ರೀರಾಮುಲು ಕಣಕ್ಕಿಳಿದು ಗೆಲುವು ಕಂಡಿದ್ದರು. ಆದರೆ ಈ ಬಾರಿ ಕ್ಷೇತ್ರ ಬದಲಾವಣೆ ಮಾಡಿ ಬಳ್ಳಾರಿ ಗ್ರಾಮೀಣ ಪ್ರದೇಶದಿಂದ ಕಣಕ್ಕಿಳಿದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.