ಬಿಜೆಪಿ ತಂತ್ರ ವಿಫಲ: ಚಾಮರಾಜನಗರ, ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಸೋಲು
ಎರಡು ಕ್ಷೇತ್ರಗಳಿಂದ ಸೋಮಣ್ಣ ಅವರನ್ನು ಕಣಕ್ಕಳಿಸಿ ತಂತ್ರ ರೂಪಿಸಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಚಾಮರಾಜನಗರ ಹಾಗೂ ವರುಣಾ ಎರಡೂ ಕ್ಷೇತ್ರಗಳಲ್ಲಿಯೂ ವಿ.ಸೋಮಣ್ಣ ಅವರು ಸೋಲು ಕಂಡಿದ್ದಾರೆ.

ಬೆಂಗಳೂರು: ಎರಡು ಕ್ಷೇತ್ರಗಳಿಂದ ಸೋಮಣ್ಣ ಅವರನ್ನು ಕಣಕ್ಕಳಿಸಿ ತಂತ್ರ ರೂಪಿಸಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಚಾಮರಾಜನಗರ ಹಾಗೂ ವರುಣಾ ಎರಡೂ ಕ್ಷೇತ್ರಗಳಲ್ಲಿಯೂ ವಿ.ಸೋಮಣ್ಣ ಅವರು ಸೋಲು ಕಂಡಿದ್ದಾರೆ.
ಚಾಮರಾಜನಗರ ಕ್ಷೇತ್ರದ ಮತಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ಪುಟ್ಟರಂಗಶೆಟ್ಟಿ ಬರೋಬ್ಬರಿ 7,383 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವಿ.ಸೋಮಣ್ಣ 75,753 ಮತಗಳನ್ನು ಗಳಿಸಿದ್ದಾರೆ.
ಇನ್ನು ಬಿಎಸ್ ಪಿಯ ಹ.ರಾ.ಮಹೇಶ್ 6,373 ಮತಗಳನ್ನು ಪಡೆದರೆ, ಜೆಡಿಎಸ್ ನ ಮಲ್ಲಿಕಾರ್ಜುನ ಸ್ವಾಮಿ 1,073 ಮತಗಳನ್ನು ಪಡೆದಿದ್ದಾರೆ. ಹೀಗೆ ಸೋಮಣ್ಣ ಚಾಮರಾಜನಗರದಲ್ಲಿ ಸೋತಿದ್ದಾರೆ.
ವರುಣಾ ಕ್ಷೇತ್ರದಲ್ಲಿಯೂ ಸೋಮಣ್ಣ ಅವರಿಗೆ ಸೋಲಾಗಿದ್ದು, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರು 30,019 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


