ರಾಜ್ಯ ವಿಧಾನಸಭಾ ಚುನಾವಣೆ 2023: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿಗೆ ಮುನ್ನಡೆ
ರಾಜ್ಯದ ವಿಧಾನಸಭಾ ಚನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನ್ನಡೆ ಸಾಧಿಸಿದ್ದಾರೆ.

ಬೆಂಗಳೂರು: ರಾಜ್ಯದ ವಿಧಾನಸಭಾ ಚನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನ್ನಡೆ ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾಸೀರ್ ಖಾನ್ ಪಠಾಣ್ ಸ್ಪರ್ಧಿಸಿದ್ದರೆ, ಜೆಡಿಎಸ್‌ನಿಂದ ಶಶಿಧರ್ ಯಲಿಗಾರ್ ಕಣಕ್ಕಿಳಿದಿದ್ದಾರೆ.
ಮುಖ್ಯಮಂತ್ರಿಯಾಗಿ ಶಿಗ್ಗಾಂವಿ ಕ್ಷೇತ್ರದಲ್ಲಿ ಜಯ ಗಳಿಸುವುದು ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯಾಗಿದೆ. 2008ರಿಂದ ಸತತವಾಗಿ ಶಿಗ್ಗಾಂವಿ ಕ್ಷೇತ್ರ ಪ್ರತಿನಿಧಿಸುತ್ತಿರುವ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ.
ಇದೀಗ ಎಲ್ಲರ ಗಮನ ಫಲಿತಾಂಶದ ಮೇಲೆ ನೆಟ್ಟಿದ್ದು, ಮುಖ್ಯಮಂತ್ರಿ ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಜಯ ಗಳಿಸುವವರು ಯಾರು ಎಂಬ ಲೆಕ್ಕಾಚಾರ ಶುರುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


