ರಾಜ್ಯ ಚುನಾವಣೆ ಫಲಿತಾಂಶ 2023: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್'ಗೆ ಹಿನ್ನಡೆ
ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ.
ಈ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹೇಶ್ ಟೆಂಗಿನಕಾಯಿ ಮುನ್ನಡೆ ಸಾಧಿಸಿದ್ದಾರೆ. ಶೆಟ್ಟರ್ ವಿರುದ್ಧ 7,496ಗಳ ಅಂತರಪಗಳಿಂದ ಮಹೇಶ್ ಮುನ್ನಡೆ ಸಾಧಿಸಿದ್ದಾರೆ.
ಜಗದೀಶ್ ಶೆಟ್ಟರ್ 1994ರಿಂದಲೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಶಾಸಕ, ಮಂತ್ರಿ, ಮುಖ್ಯಮಂತ್ರಿ ಹುದ್ದೇಗೇರಿದವರು ಜಗದೀಶ್ ಶೆಟ್ಟರ್. ಟಿಕೆಟ್ ನೀಡದ ಒಂದೇ ಕಾರಣಕ್ಕಾಗಿ ಬಿಜೆಪಿ ಜೊತೆಗಿನ ದೀರ್ಘಕಾಲದ ಸಂಬಂಧ ಮುರಿದುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಬಿಜೆಪಿ ಪಕ್ಷದಿಂದ ಮಹೇಶ್ ಟೆಂಗಿನಕಾಯಿ ಸ್ಪರ್ಧಿಸಿದ್ದು, ತೀವ್ರ ಪೈಪೋಟಿ ನೀಡಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಯಾರ ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದು ಮಧ್ಯಾಹ್ನದೊಳಗಾಗಿ ಸ್ಪಷ್ಟ ಚಿತ್ರಣಗಳು ದೊರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


