ಸುದ್ದಿಗಳು

92ನೇ ವಯಸ್ಸಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ ಶಾಮನೂರು ಶಿವಶಂಕರಪ್ಪ ಈಗ ಭಾರತದ ಅತಿ ಹಿರಿಯ ಶಾಸಕ!

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಭಾರತ ದೇಶದ ಅತಿ ಹಿರಿಯ ಶಾಸಕ ಎನಿಸಿಕೊಂಡಿದ್ದಾರೆ.

92ನೇ ವಯಸ್ಸಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ ಶಾಮನೂರು ಶಿವಶಂಕರಪ್ಪ ಈಗ ಭಾರತದ ಅತಿ ಹಿರಿಯ ಶಾಸಕ!
ಶಾಮನೂರ್ ಶಿವಶಂಕರಪ್ಪ
Published On :

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಭಾರತ ದೇಶದ ಅತಿ ಹಿರಿಯ ಶಾಸಕ ಎನಿಸಿಕೊಂಡಿದ್ದಾರೆ. ಅವರು ಈ ಬಾರಿ  ಒಟ್ಟು 84,258 ಮತಗಳನ್ನು ಪಡೆದಿದ್ದಾರೆ. ಎದುರಾಳಿ ಅಭ್ಯರ್ಥಿ ಬಿಜೆಪಿಯ ಬಿ ಜಿ ಅಜಯಕುಮಾರ್ 56,410 ಮತಗಳನ್ನು ಪಡೆದಿದ್ದು 27,888 ಮತಗಳ ಅಂತರದಿಂದ ಶಾಮನೂರು ಶಿವಶಂಕರಪ್ಪ ಸೋಲಿಸಿದ್ದಾರೆ. 

ಕಾಂಗ್ರೆಸ್‌ನ ಭದ್ರಕೋಟೆ ಆಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಶಾಮನೂರು ಶಿವಶಂಕರಪ್ಪ ಅವರ ಗೆಲುವು ಕಠಿಣವಿದೆ ಎಂದೇ ಅಂದಾಜಿಸಲಾಗಿತ್ತು. ಆದರೂ, ಅವರು ಬರೋಬ್ಬರಿ 27,888 ಮತಗಳ ಅಂತರದಿಂದ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ 92 ವರ್ಷ ವಯಸ್ಸಿನಲ್ಲೂ ರಾಜಕೀಯ ಹುರುಪು ಉಳಿಸಿಕೊಂಡಿದ್ದಾರೆ.

ಇಲ್ಲಿ ಜೆಡಿಎಸ್ ಅಭ್ಯರ್ಥಿ ಅಮಾನುಲ್ಲಾ ಖಾನ್ 1,296 ಮತಗಳನ್ನು ಗಳಿಸಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಒಟ್ಟು 2,10,668 ಮತದಾರರಿದ್ದು, ಅವರಲ್ಲಿ 1,45,534 ಮತದಾನವಾಗಿತ್ತು.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.