ಕಾಂಗ್ರೆಸ್- ಬಿಜೆಪಿ ನಡುವೆ ಪೈಪೋಟಿ; ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್‌ಗೆ ಆರಂಭಿಕ ಹಿನ್ನಡೆ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತಎಣಿಕೆಯ ಆರಂಭಿಕ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ಕೂಡ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತಎಣಿಕೆಯ ಆರಂಭಿಕ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ಕೂಡ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಆರಂಭಿಕ ಟ್ರೆಂಡ್‌ಗಳು ಲಭ್ಯವಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ತಲಾ 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಹಾಗೂ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಗೆ ಹಿನ್ನೆಡೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ: ಮತ ಎಣಿಕೆ ಆರಂಭ, ಫಲಿತಾಂಶದ ನಂತರ ತಂತ್ರ ರೂಪಿಸಲು ಕಾಂಗ್ರೆಸ್, ಬಿಜೆಪಿ ಸಿದ್ಧ
ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರಂಭಿಕ ಹಂತದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


