ಡಿಕೆಶಿ ಸತತ 8ನೇ ಬಾರಿ ಗೆಲುವು; ಈ ಬಾರಿ ದಾಖಲೆಯ 1,21,595 ಮತಗಳ ಅಂತರದಿಂದ ಜಯ
1989 ರಿಂದ ಗೆಲುವಿನ ನಾಗಾಲೋಟವನ್ನು ಮುಂದುವರೆಸಿರುವ 'ಕನಕಪುರ ಬಂಡೆ' ಖ್ಯಾತಿಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಒಕ್ಕಲಿಗ ಪ್ರಬಲ ನಾಯಕ ಡಿ ಕೆ ಶಿವಕುಮಾರ್ ಅವರು ಶನಿವಾರ ಸತತ ಎಂಟನೇ ಬಾರಿಗೆ....

ರಾಮನಗರ: 1989 ರಿಂದ ಗೆಲುವಿನ ನಾಗಾಲೋಟವನ್ನು ಮುಂದುವರೆಸಿರುವ 'ಕನಕಪುರ ಬಂಡೆ' ಖ್ಯಾತಿಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಒಕ್ಕಲಿಗ ಪ್ರಬಲ ನಾಯಕ ಡಿ ಕೆ ಶಿವಕುಮಾರ್ ಅವರು ಶನಿವಾರ ಸತತ ಎಂಟನೇ ಬಾರಿಗೆ ಗೆಲುವು ಸಾಧಿಸಿದ್ದು, ಈ ಬಾರಿ ದಾಖಲೆಯ 1,21,595 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು ತಮ್ಮ ಪ್ರತಿಸ್ಪರ್ಧಿ ಜನತಾದಳ(ಜಾತ್ಯತೀತ) ಬಿ ನಾಗರಾಜು(20,561 ಮತ ಪಡೆದಿದ್ದಾರೆ) ವಿರುದ್ಧ 1,42,156 ಮತಗಳನ್ನು ಪಡೆದ್ದಾರೆ.
ಭಾರತೀಯ ಜನತಾ ಪಕ್ಷದ(ಬಿಜೆಪಿ) ಆರ್ ಅಶೋಕ 19,602 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಶಿವಕುಮಾರ್ ಅವರ ಗೆಲುವಿನ ಅಂತರ 2018ಕ್ಕಿಂತ ಈ ಹಾಕಿ ಹೆಚ್ಚಾಗಿದೆ. ಕಳೆದ ಬಾರಿ ಅವರು 79,909 ಮತಗಳ ಅಂತರದಿಂದ ಗೆದ್ದು ಜೆಡಿಎಸ್ ಅಭ್ಯರ್ಥಿ ನಾರಾಯಣ ಗೌಡ ಅವರನ್ನು ಸೋಲಿಸಿದ್ದರು.
2008 ರ ನಂತರ ಕನಕಪುರದಿಂದ ಶಿವಕುಮಾರ್ ಸತತ ನಾಲ್ಕನೇ ಗೆಲುವು ಸಾಧಿಸಿದ್ದಾರೆ. ಅದಕ್ಕೂ ಮುನ್ನ ಅವರು ಹಿಂದಿನ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದರು.
ಬಿಜೆಪಿಯ ಒಕ್ಕಲಿಗ ಮುಖ ಎಂದೇ ಪರಿಗಣಿಸಲಾಗಿರುವ ಕಂದಾಯ ಸಚಿವ ಅಶೋಕ್ ಅವರನ್ನು ಈ ಬಾರಿ ಕನಕಪುರದಿಂದ ಕಣಕ್ಕಿಳಿಸಲಾಗಿತ್ತು. ಕ್ಷೇತ್ರದಲ್ಲಿ ಪಕ್ಷವನ್ನು ಬಲವರ್ಧನೆ ಮಾಡಲು ಸಹಕಾರಿಯಾಗಲಿದೆ ಎಂಬ ಭರವಸೆಯೊಂದಿಗೆ ಬಿಜೆಪಿ ಅವರನ್ನು ಕಣಕ್ಕಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


