ಅಥಣಿ- ಜಾರಿಬಿದ್ದ ಜಾರಕಿಹೊಳಿ: ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ; ಮಹೇಶ್ ಕುಮಟಳ್ಳಿಗೆ ಹೀನಾಯ ಸೋಲು
ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್ ಸೋಲಿನತ್ತ ಮುಖ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿಯೂ ಗೆದ್ದು ಬೀಗಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಸವದಿಗೆ ಗೆಲುವು ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


