105 ಮತಗಳಿಂದ ದಿನೇಶ್ ಗುಂಡೂರಾವ್, 160 ಮತಗಳಿಂದ ಸೌಮ್ಯ ರೆಡ್ಡಿ ಪ್ರಯಾಸದ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜಧಾನಿ ಬೆಂಗಳೂರಿನ ಹೃದಯ ಭಾಗವಾದ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜಧಾನಿ ಬೆಂಗಳೂರಿನ ಹೃದಯ ಭಾಗವಾದ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್ ಕೇವಲ 105 ಮತಗಳ ಅಂತರದಿಂದ ಪ್ರಯಾಸದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಅವರು 113 ಮತಗಳಿಂದ ಗೆಲುವು ಸಾಧಿಸಿದರು. ಆದರೆ, ಕಡಿಮೆ ಅಂತರದಲ್ಲಿ ಗೆದ್ದ ಹಿನ್ನಲೆ ಮರು ಎಣಿಕೆ ಮಾಡುವಂತೆ ಸಪ್ತಗಿರಿ ಗೌಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು. ಮರು ಎಣಿಕೆ ನಂತರ ದಿನೇಶ್ ಗುಂಡೂರಾವ್ ಅವರು ಕೇವಲ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಜಿದ್ದಾಜಿದ್ದಿ ಇದ್ದ ಕ್ಷೇತ್ರ ಗಾಂಧಿನಗರ ಬಿಜೆಪಿಯ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಮಚಂದ್ರ ಗೌಡ ಅವರ ಪುತ್ರ ಸಪ್ತಗಿರಿ ಗೌಡ ಸ್ಪರ್ಧಿಸಿದ್ರು. ಹಾಗೇ ಜೆಡಿಎಸ್ ಪಕ್ಷದಿಂದ ವಿ. ನಾರಾಯಣಸ್ವಾಮಿ, ಬಿಜೆಪಿ ಟಿಕೆಟ್ ವಂಚಿತ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದರು.
ಇನ್ನು ಬೆಂಗಳೂರಿನ ಜಯನಗರ ಕ್ಷೇತ್ರದಲ್ಲಿ ಕೇವಲ 160 ಮತಗಳ ಅಂತರದಲ್ಲಿ ಸೌಮ್ಯ ರೆಡ್ಡಿ ಅವರು ಸಹ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ ಪಾಳಯ ರೀ ಕೌಂಟಿಂಗ್ ಆಗಬೇಕು ಎಂದು ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


