ಕರ್ನಾಟಕ ಚುನಾವಣಾ ಫಲಿತಾಂಶ: 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಮುನ್ನಡೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ
ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಂಜಾನೆ ಆರಂಭಗೊಂಡಿದ್ದು, ಅಂದಿನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಬೆಂಗಳೂರು: ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಂಜಾನೆ ಆರಂಭಗೊಂಡಿದ್ದು, ಅಂದಿನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
10.30 ಗಂಟೆಗೆ ಲಭ್ಯವಾದ ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಕಾಂಗ್ರೆಸ್ 115 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಜೆಡಿಎಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇನ್ನುಳಿದಂತೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಮೂವರು ಸ್ವತಂತ್ರ ಅಭ್ಯರ್ಥಿಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೇ 10 ರಂದು ಮತದಾನ ಮುಗಿದ ನಂತರ ಹೊರಬಿದ್ದ ಎಕ್ಸಿಟ್ ಪೋಲ್ಗಳು ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದ್ದವು. ಆದರೆ, ಕೆಲವು ಸಮೀಕ್ಷೆಗಳು ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರಕ್ಕೇರುತ್ತದೆ ಎಂದಿದ್ದವು. ಬಹುತೇಕ ಎಕ್ಸಿಟ್ ಪೋಲ್ಗಳು ಬಿಜೆಪಿ ತೀವ್ರವಾಗಿ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದವು.
ಇದನ್ನೂ ಓದಿ: ಕರ್ನಾಟಕ ಚುನಾವಣೆ ಫಲಿತಾಂಶ: ಜನರು ಬಿಜೆಪಿ- ಪ್ರಧಾನಿ ಮೋದಿಯನ್ನು ತಿರಸ್ಕರಿಸಿದ್ದಾರೆ; ಕಾಂಗ್ರೆಸ್ ನಾಯಕರು
ಬುಧವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆಯುವ ಎಲ್ಲಾ ಸೂಚನೆಗಳು ಕಾಣುತ್ತಿವೆ. ನಾಲ್ಕು ಎಕ್ಸಿಟ್ ಪೋಲ್ಗಳು ಪೂರ್ಣ ಬಹುಮತವನ್ನು ನೀಡಿದ್ದು, ಕೆಲವು ಪಕ್ಷವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿತ್ತು. ಅತಂತ್ರ ವಿಧಾನಸಭೆ ಸೃಷ್ಟಿಯಾದರೆ, ಅಂತಹ ಸಂದರ್ಭಗಳಲ್ಲಿ, ಜೆಡಿಎಸ್ ಕಿಂಗ್ ಮೇಕರ್ ಪಾತ್ರವನ್ನು ವಹಿಸಲು ಕಾದು ಕುಳಿತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


