ಮೈಸೂರು: ಪತ್ನಿಯ ಕಿರುಕುಳ ತಡೆಯಲಾರದೆ ಮರ ಏರಿ ಕುಳಿತ ಪತಿ!
ಪತ್ನಿಯ ಕಿರುಕುಳ ತಡೆಯಲಾರದೆ ವೆಂಕಟೇಶ್ ಎಂಬ ವ್ಯಕ್ತಿ ತೆಂಗಿನ ಮರ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಮೈಸೂರಿನ ಸರಸ್ವತಿ ಪುರಂ ನಲ್ಲಿ ನಡೆದಿದೆ.

ಮೈಸೂರು: ಪತ್ನಿಯ ಕಿರುಕುಳ ತಡೆಯಲಾರದೆ ವೆಂಕಟೇಶ್ ಎಂಬ ವ್ಯಕ್ತಿ ತೆಂಗಿನ ಮರ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಮೈಸೂರಿನ ಸರಸ್ವತಿ ಪುರಂ ನಲ್ಲಿ ನಡೆದಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮರವೇರಿ ಕುಳಿತಿರುವ ವ್ಯಕ್ತಿಯನ್ನು ಕೆಳಗಿಳಿಯುವಂತೆ ಮನವೊಲಿಕೆ ಮಾಡುತ್ತಿದ್ದಾರೆ. ಮರದಿಂದ ಕೆಳಗಿಳಿಯಲು ನಿರಾಕರಿಸಿರುವ ವೆಂಕಟೇಶ್ ಪತ್ನಿ ಹೊಡೆಯುತ್ತಾಳೆ, ಕಿರುಕುಳ ನೀಡುತ್ತಾಳೆ ಎಂದು ಆರೋಪಿಸಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೆಂಕಟೇಶ್ ಅವರ ಪತ್ನಿ ಸುಶೀಲಾ, ಪತಿಗೆ ಮಾನಸಿಕ ಸಮಸ್ಯೆ ಇದೆ. ಅವರ ಹೆಸರಿನಲ್ಲೇ ಆಸ್ತಿ ಇದ್ದು, ಮಾನಸಿಕ ಸಮಸ್ಯೆ ಎದುರಿಸುತ್ತಿರುವುದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಹೇಳಿದ್ದಾರೆ.
ವೆಂಕಟೇಶ್ ನ ಸಂಬಂಧಿಕರು ಸಹ ಆತನನ್ನು ಮರ ಇಳಿಯುವಂತೆ ಮನವೊಲಿಕೆ ಮಾಡಲು ಯತ್ನಿಸುತ್ತಿದ್ದಾರೆ. ಯಾವುದೇ ಮನವೊಲಿಕೆಗೂ ಜಗ್ಗದ ವೆಂಕಟೇಶ್ ರೆಬೆಲ್ ಸ್ಟಾರ್ ಅಂಬರೀಶ್ ಬಂದರೇನೆ ಮರದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


