ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರ ಸಂಚು: ನಗರದಲ್ಲಿ ಕಟ್ಟೆಚ್ಚರ

ಏಪ್ರಿಲ್‌ 17ರಂದು ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಪೊಲೀಸರಿಗೆ ನೀಡಿದ್ದು...

ಸಿಲಿಕಾನ್ ಸಿಟಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರ ಸಂಚು: ನಗರದಲ್ಲಿ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಏಪ್ರಿಲ್‌ 17ರಂದು ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಪೊಲೀಸರಿಗೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ನಗರದೆಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.

ನಗರವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಅಧಿಕಾರಿಗಳು ನಗರಕ್ಕೆ ಆಗಮಿಸಿದ್ದು, ಇಲ್ಲಿ ಅಡಗಿರುವ ಉಗ್ರರರಿಗಾಗಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆ ಕುರಿತ ಮಾಹಿತಿ ನೀಡಲು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೆ, ಶಂಕಿತ ಉಗ್ರರು ನಗರದಲ್ಲಿ ಅಡಗಿರುವ ಮಾಹಿತಿ ದೊರೆತ ಕಾರಣ ಆಗ್ನೇಯ ವಿಭಾಗಕ್ಕೆ ಧಾವಿಸಿದ ಎನ್‌ಐಎ ಅಧಿಕಾರಿಗಳು ಅಲ್ಲಿ ಹುಡುಕಾಟ ನಡೆಸಿದ್ದಾರೆ. ಈ ಬಗ್ಗೆ ರಾಜ್ಯದ ಅಂತರಿಕ ಭದ್ರತಾ ಪಡೆ, ಗುಪ್ತದಳ ಅಧಿಕಾರಿಗಳೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಅಸ್ಸಾಂ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಐಸಿಸ್‌ ಜೊತೆ ನಂಟು ಹೊಂದಿದ್ದ ಬೋಡೋ ಉಗ್ರರನ್ನು ನಗರದಲ್ಲಿ ಬಂಧಿಸಿದ್ದರು. 2013ರ ಏಪ್ರಿಲ್‌ 17ರಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಉಗ್ರರು ಬಾಂಬ್‌ ಸ್ಫೋಟಿಸಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.