ರಾಜ್ಯ

ಕಲಬುರಗಿ: ಲಾರಿ ಮತ್ತು ಕ್ರೂಸರ್ ಡಿಕ್ಕಿ, ಗಾಯಗೊಂಡಿದ್ದ ಐವರ ಸಾವು

ಚಿತ್ತಾಪುರದ ಬಳಿ ಕಳೆದ ರಾತ್ರಿ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ...

ಕಲಬುರಗಿ: ಲಾರಿ ಮತ್ತು ಕ್ರೂಸರ್ ಡಿಕ್ಕಿ, ಗಾಯಗೊಂಡಿದ್ದ ಐವರ ಸಾವು
ಅಪಘಾತ
Published On :

ಕಲಬುರಗಿ: ಚಿತ್ತಾಪುರದ ಬಳಿ ಕಳೆದ ರಾತ್ರಿ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದ 14 ಮಂದಿಗೆ ಗಂಭೀರ ಗಾಯಗಳಾಗಿದ್ದು, ಆ ಪೈಕಿ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಕಲಬುರಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೃತರು ಚಿಂಚೋಳಿ ತಾಲೂಕಿನ ಎರಕಪಲ್ಲಿ ಗ್ರಾಮದ ನಿವಾಸಿಗಳಾಗಿದ್ದು ಮಹೇಶ್, ತಿಪ್ಪಣ್ಣ ಭುತಾಳೆ, ಶ್ರೀಕಾಂತ್ ಮತ್ತು ತಿರುಪತಿ ಹಾಗೂ ಸಿದ್ದಪ್ಪ ಎಂದು ಗುರುತಿಸಲಾಗಿದೆ.

ರಾಯಚೂರ ಜಿಲ್ಲೆ ಲಿಂಗಸೂಗುರನಲ್ಲಿ ಮದುವೆ ಮುಗಿಸಿಕೊಂಡು ವಾಪಾಸ್ ಬರುತ್ತಿರುವಾಗ ಅಪಘಾತ ಸಂಭವಿಸಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.