ಚಾರಣಕ್ಕೆ ತೆರಳಿದ್ದ ಪತ್ರಕರ್ತನ ಸಾವು
ಚಾರಣಕ್ಕೆ ತೆರಳಿದ್ದ ಯುವ ಪತ್ರಕರ್ತನೋರ್ವ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ...

ಮಂಗಳೂರು: ಚಾರಣಕ್ಕೆ ತೆರಳಿದ್ದ ಯುವ ಪತ್ರಕರ್ತನೋರ್ವ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಶುಕ್ರವಾರ ಯುಗಾದಿ ಹಬ್ಬದ ಪ್ರಯುಕ್ತ ಕಚೇರಿ ರಜೆ ಇದ್ದಿದ್ದರಿಂದ ಚಾರಣಕ್ಕೆ ತೆರಳಿದ್ದ ಪ್ರಜಾವಾಣಿ ಪತ್ರಿಕೆಯ ಮಂಗಳೂರು ವರದಿಗಾರ ಹಮೈದ್ ಹುಸೇನ್ (27) ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಚಾರಣಕ್ಕೆ ತೆರಳಿದ್ದಾಗ ಹಮೀದ್ ಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಹುಸೇನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಪತ್ರಿಕೆಯ ಒಟ್ಟು 36 ಮಂದಿ ಪತ್ರಕರ್ತರು ಚಾರಣಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.
Very sad to hear that young journalist Haimad Husain (28) passed away today afternoon... He was very close friend of mine. RIP...
Posted by Kishan Rajput on Friday, April 8, 2016
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


