ರಾಜ್ಯ

ಕರ್ನಾಟಕ ಲಾಟರಿ ಹಗರಣ: ಜಾರಿ ನಿರ್ದೇಶನಾಲಯದಿಂದ 122 ಕೋಟಿ ಆಸ್ತಿ ಜಪ್ತಿ

ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿದ್ದ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿವಿಧ ಕಂಪನಿಗಳ 112 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು...

ಕರ್ನಾಟಕ ಲಾಟರಿ ಹಗರಣ: ಜಾರಿ ನಿರ್ದೇಶನಾಲಯದಿಂದ 122 ಕೋಟಿ ಆಸ್ತಿ ಜಪ್ತಿ
ಲಾಟರಿ
Published On :

ನವದೆಹಲಿ: ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿದ್ದ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿವಿಧ ಕಂಪನಿಗಳ 112 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಸಿಬಿಐನ ಎಫ್ಐಆರ್ ಆಧರಿಸಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತಮಿಳುನಾಡಿನ ಕೊಯಂಬತ್ತೂರು ಮೂಲದ 4 ಸಂಸ್ಥೆಗಳ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿ ಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ 2007ರಲ್ಲಿ ಲಾಟರಿ ಉದ್ಯಮ ನಿಷೇಧಿಸಲಾಗಿತ್ತು. ಆದರೆ ಆರೋಪಿಗಳಾದ ಎಸ್. ಮಾರ್ಟಿನ್ ಮತ್ತಿತರು ಪೊಲೀಸ್ ಅಧಿಕಾರಿಗಳ ಸಹಾಯದಿಂದ ದಂಧೆ ನಡೆಸುತ್ತಿದ್ದರು.

ತಮಿಳುನಾಡಿನ ಡೈಸನ್ ಲ್ಯಾಂಡ್ ಆಂಡ್ ಡೆವಲಪ್‌ಮೆಂಡ್, ಚಾರ್ಲ್ಸ್ ರಿಯಲ್ಟರ್, ಮಾರ್ಟಿನ್ ಮಲ್ಟಿ ಪ್ರೊಜೆಕ್ಸ್, ಡೈಸನ್ ಲಕ್ಷುರಿ ವಿಲ್ಲಾಸ್ ಎಂಬ ಸಂಸ್ಥೆಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.