ರಾಜ್ಯ

ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರು ಖಾಲಿ, ಡೆಡ್ ಸ್ಟೋರೇಜ್ ಹಂತಕ್ಕೆ ಕುಸಿತ

ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು ಡೆಡ್ ಸ್ಟೋರೇಜ್ ಮತ್ತ ತಲುಪಿದೆ.

ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರು ಖಾಲಿ,  ಡೆಡ್ ಸ್ಟೋರೇಜ್ ಹಂತಕ್ಕೆ ಕುಸಿತ
ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರು ಖಾಲಿ
Published On :

ಬೆಂಗಳೂರು: ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು ಡೆಡ್ ಸ್ಟೋರೇಜ್ ಮಟ್ಟ ತಲುಪಿದೆ. 13 ಪ್ರಮುಖ ಜಲಾಶಯಗಳಿದ್ದು ಒಟ್ಟು 860 .51 ಟಿಎಂಸಿ ಅಡಿ ನೀರು ಸಂಗ್ರಹಣೆ ಸಾಮಾರ್ಥ್ಯ ಹೊಂದಿವೆ. ಪ್ರಸ್ತುತ 13 ಜಲಾಶಯಗಳಲ್ಲಿ ಉಳಿದಿರುವುದು ಕೇವಲ 191 .01 ಅಡಿ ನೀರು ಮಾತ್ರ.
ಲಿಂಗನಮಕ್ಕಿಯ ಜಲಾಶಯದಲ್ಲಿ 40 ಟಿಎಂಸಿ ಅಡಿ ನೀರಿದ್ದು ಆತಂಕಕಾರಿ ಪರಿಸ್ಥಿತಿ ಇಲ್ಲ. ಆದರೆ  ಹಾರಂಗಿ, ಮಲಪ್ರಭಾ, ತುಂಗಭದ್ರಾ, ಹೇಮಾವತಿ, ಕಬಿನಿ, ವರಾಹ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಆತಂಕಕಾರಿ ಸ್ಥಿತಿ  ಎದುರಾಗಿದೆ. ಇನ್ನು ಬೆಂಗಳೂರು - ಮೈಸೂರು, ಮಂಡ್ಯ ಪ್ರದೇಶಗಳಿಗೆ ಜೀವಸೆಲೆಯಾಗಿರುವ ಕೃಷ್ಣ ರಾಜ ಸಾಗರ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದಿದ್ದು 11.97 ಟಿಎಂಸಿ ಅಡಿ ನೀರು ಉಳಿದಿದೆ. ಕೆಆರ್ ಎಸ್ ನಲ್ಲಿ ನೀರಿನ ಮತ್ತ ಕುಸಿದಿದ್ದರೂ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಬೆಂಗಳೂರು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿಗೆ ಒಂದು ತಿಂಗಳಿಗೆ 1.5 ಟಿಎಂಸಿ ನೀರಿನ ಅಗತ್ಯವಿದ್ದು ಬೆಂಗಳೂರಿಗೆ ಅಗತ್ಯವಿರುವ ನೀರನ್ನು ಪೂರೈಕೆ ಮಾಡುವಂತೆ ಕೆಆರ್ ಎಸ್ ಅಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಿದ್ದೇವೆ ಆದ್ದರಿಂದ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ನೀರಿನ ಸಮಸ್ಯೆ ಎದುರಾಗುವ ಬಗ್ಗೆ ಮಾತನಾಡಿರುವ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಜೂನ್ ವರೆಗೂ  ನೀರಿನ ಪೂರೈಕೆ ನಿರ್ವಹಣೆ ಮಾಡಬೇಕಿದೆ. ಜೂನ್ ನಲ್ಲಿಯೂ ಮಳೆಯಾಗದೆ ಇದ್ದರೆ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂದು ಎಂಬಿ ಪಾಟೀಲ್ ಎಚ್ಚರಿಸಿದ್ದಾರೆ.      

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.