ಎಸಿಬಿ ಕಾರ್ಯನಿರ್ವಹಣೆ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿರುವ ಸಿಎಂ
ಭ್ರಷ್ಟಾಚಾರ ನಿಗ್ರಹ ದಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏ.11 ರಂದು ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏ.11 ರಂದು ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.
ಎಸಿಬಿ ಕಾರ್ಯನಿರ್ವಹಣೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದ ನಂತರ ಸಿದ್ದರಾಮಯ್ಯ ಉನ್ನತಮಟ್ಟದ ಸಭೆ ಕರೆದಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಎಸಿಬಿ ಕಾರ್ಯನಿರ್ವಹಣೆ ಹಾಗೂ ಅಧಿಕಾರಿಗಳ ನೇಮಕಾತಿ ವಿಷಯದ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ವಕೀಲ ಬಿ.ಜಿ. ಚಿದಾನಂದ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಭ್ರಷ್ಟಾಚಾರದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಯೆ ತನಿಖೆ ನಡೆಸಬೇಕು ಮತ್ತು ಬಾಕಿ ಉಳಿದಿರುವ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ಎಸಿಬಿಗೆ ವರ್ಗಾಯಿಸುವಂತಿಲ್ಲ ಎಂದು ಸೂಚಿಸಿತ್ತು.
ಎಸಿಬಿ ರಚನೆಯ ಸಿಂಧುತ್ವ ಪ್ರಶ್ನಿಸಿ ಬಿ.ಜಿ. ಚಿದಾನಂದ ಅವರು ಅರ್ಜಿ ಸಲ್ಲಿಸಿದ್ದು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


