ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆವರೆಗಿನ ಸುರಂಗ ಮೆಟ್ರೊಗೆ ಗ್ರೀನ್ ಸಿಗ್ನಲ್
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ...

Published On :
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಸೋಮವಾರ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಸುರಂಗ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭಿಸಲು ಅನುಮತಿ ಕೋರಿ ನಿಗಮವು ಸುರಕ್ಷತಾ ಆಯುಕ್ತರಿಗೆ ಮಾರ್ಚ್ 25ರಂದು ಅರ್ಜಿ ಸಲ್ಲಿಸಿತ್ತು. ಪರಿಶೀಲನೆ ನಡೆಸಿದ ನಂತರ ಸುರಕ್ಷತಾ ಆಯುಕ್ತರು ಇಂದು ಸಂಚಾರಕ್ಕೆ ಅನುಮತಿ ನೀಡಿದ್ದಾರೆ.
ಮೆಟ್ರೊ ಮಾರ್ಗಗಳಲ್ಲಿ ವಾಣಿಜ್ಯ ಸಂಚಾರ ಪ್ರಾರಂಭಿಸಲು ರೈಲ್ವೆ ಇಲಾಖೆಗೆ ಸೇರಿದ 2 ಸಂಸ್ಥೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ. ಆ ಎರಡು ಸಂಸ್ಥೆಗಳೆಂದರೆ ‘ರಿಸರ್ಚ್ ಡಿಸೈನ್ಸ್ ಅಂಡ್ ಸ್ಟಾಂಡರ್ಡ್‌್ಸ ಆರ್ಗನೈಸೇಷನ್’ (ಆರ್‌ಡಿಎಸ್‌ಒ) ಮತ್ತು ಮೆಟ್ರೊ ರೈಲು ಸುರಕ್ಷತಾ ಆಯುಕ್ತರ (ಎಂಸಿಆರ್‌ಎಸ್) ಕಚೇರಿ.
ಆರ್‌ಡಿಎಸ್‌ಒ ತಂತ್ರಜ್ಞರು ಪರಿಶೀಲಿಸಿ ಈಗಾಗಲೇ ಪ್ರಮಾಣಪತ್ರ ನೀಡಿದ್ದಾರೆ. ಬೇರೆ ಬೇರೆ ವೇಗದಲ್ಲಿ ರೈಲು ಹೇಗೆ ಓಡಲಿದೆ, ಹಳಿಗಳ ಮೇಲೆ ಉಂಟಾಗುವ ಒತ್ತಡದ ಪರಿಣಾಮಗಳು– ಇವೇ ಮೊದಲಾದ ಅಂಶಗಳ ಬಗ್ಗೆ ಆರ್‌ಡಿಎಸ್‌ಒದ ತಂತ್ರಜ್ಞರು ಪರಿಶೀಲಿಸಿದ್ದರು. ಸುರಕ್ಷತಾ ಆಯುಕ್ತರು ಸುರಕ್ಷತೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಪರಿಶೀಲಿಸಿ ಅನುಮತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


