ರಾಜ್ಯ

ರಸ್ತೆ ಅಪಘಾತದಲ್ಲಿ ಪಿಯು ವಿದ್ಯಾರ್ಥಿ ದುರ್ಮರಣ

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿ ಮೃತ ಪಟ್ಟು ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ...

ರಸ್ತೆ ಅಪಘಾತದಲ್ಲಿ ಪಿಯು ವಿದ್ಯಾರ್ಥಿ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು:  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿ ಮೃತ ಪಟ್ಟು ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಗೇಟ್ ಬಳಿ ನಡೆದಿದೆ.

ಕೆಂಪಾಪುರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿ ಆರ್ .ಟಿ ನಗರದ ನಿವಾಸಿ ಅರವಿಂದ್ ಮುರುಳೀದರನ್ ಮೃತ ದುರ್ದೈವಿ. ಈತ ಇಂದು ಬೆಳಗ್ಗೆ ತನ್ನ ಬೈಕ್ ನಲ್ಲಿ ಕಾಲೇಜಿಗೆ ತನ್ನ ಹೋಂಡಾ ಆಕ್ಟೀವಾ ದಲ್ಲಿ ತೆರಳುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರೊಂದು ಅರವಿಂದನ ಆಕ್ಟೀವಾ ಮತ್ತು ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಅರವಿಂದ್ ಮುರುಳಿಧರ್ ಮತ್ತು  ಇನ್ನೊಬ್ಬ ಬೈಕ್ ಸವಾರ ವಿಜಯ್ ಹೀರೆಮಠ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮದ್ಯದಲ್ಲೇ ಅರವಿಂದ್ ಮೃತ ಪಟ್ಟಿದ್ದಾನೆ. ಇನ್ನು ತೀವ್ರ ಗಾಯಹಗೊಂಡಿರುವ ವಿಜಯ್ ಹೀರೆಮಠ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಮಾರುತಿ ಆಲ್ಟೋ ಕಾರು ಚಲಾಯಿಸುತ್ತಿದ್ದ ಅನಿತಾ ಸೇನ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಖಾಸಗಿ ಕಂಪನಿಯೊಂದರಲ್ಲಿ ಗ್ರಾಫಿಕ್ ಡಿಸೈನರ್ ಆಗಿರುವ ಅನಿತಾ ಸೇನ್  ಲರ್ನಿಂಗ್ ಲೈಸೆನ್ಸ್ ಹೊಂದಿದ್ದಾರೆ. ಅನಿತಾ ಸೇನ್ ವಿರುದ್ಧ ಹೆಬ್ಬಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.