ವಿಧಾನಸೌಧ ಮುಂಭಾಗದ ಮೆಟ್ರೋ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು
ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣವಾಗಿರುವ ಮೆಟ್ರೋ ರೈಲು ನಿಲ್ದಾಣಕ್ಕೆ ಡಾ. ಬಿಆರ್ ಅಂಬೇಡ್ಕರ್ ಹೆಸರು...

Published On :
ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣವಾಗಿರುವ ಮೆಟ್ರೋ ರೈಲು ನಿಲ್ದಾಣಕ್ಕೆ ಡಾ. ಬಿಆರ್ ಅಂಬೇಡ್ಕರ್ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಅಂಬೇಡ್ಕರ್ ಅವರು 125ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ವಿಧಾನಸೌಧ ಮುಂಭಾಗದಲ್ಲಿರುವ ಮೆಟ್ರೋ ರೈಲು ನಿಲ್ದಾಣ, ಯಶವಂತಪುರ ರೈಲು ನಿಲ್ದಾಣ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಉದ್ದೇಶಿತ ಲಂಡನ್ ಸ್ಕೂಲ್ ಆಫ್ ಎಕಾನಮಿಕ್ಸ್ ಮಾದರಿ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರು ನಾಮಕರಣ ಮಾಡುವುದಾಗಿ ತಿಳಿಸಿದ್ದಾರೆ.
ಯಶವಂತಪುರ ರೈಲು ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಇಡುವಂತೆ ಕೇಂದ್ರ ರೈಲ್ವೆ ಇಲಾಖೆ ಶಿಫಾರಸು ಮಡುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Vidhana SoudhaವಿಧಾನಸೌಧSiddaramaiahಸಿದ್ದರಾಮಯ್ಯDr BR Ambedkarಡಾ.ಬಿಆರ್ ಅಂಬೇಡ್ಕರ್Metro stationಮೆಟ್ರೋ ನಿಲ್ದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


