ರಾಜ್ಯ

ಬರ ಪರಿಹಾರಕ್ಕೆ ಬಿಜೆಪಿ ಶಾಸಕ, ಸಂಸದರ ತಿಂಗಳ ವೇತನ: ಬಿಎಸ್ ವೈ

: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಸಂಬಂಧ ತಿಂಗಳ ವೇತನವನ್ನು ಬರಿ ಪರಿಹಾರ ನಿಧಿಗೆ ನೀಡುವಂತೆ ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...

ಬರ ಪರಿಹಾರಕ್ಕೆ ಬಿಜೆಪಿ ಶಾಸಕ, ಸಂಸದರ ತಿಂಗಳ ವೇತನ: ಬಿಎಸ್ ವೈ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಸಂಬಂಧ ತಿಂಗಳ ವೇತನವನ್ನು ಬರಿ ಪರಿಹಾರ ನಿಧಿಗೆ ನೀಡುವಂತೆ ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.

ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು, ರಾಜ್ಯಾದಾದ್ಯಂತ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಜನರ ಸಂಕಷ್ಟಕ್ಕೆ ನೆರವಾಗುವ ಸಲುವಾಗಿ ಒಂದು ತಿಂಗಳ ವೇತನವನ್ನು ಬರಿ ಪರಿಹಾರ ನಿಧಿ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಎದುರಾಗಿರುವ ಬರ ಹಿನ್ನೆಲೆಯಲ್ಲಿ ಏ.27 ರಿಂದ ಐದು ದಿನಗಳ ಕಾಲ ಯಡಿಯೂರಪ್ಪ ಅವರು ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬೀದರ್ ನಿಂದ ಪ್ರವಾಸ ಆರಂಭಿಸಲಿರುವ ಯಡಿಯೂರಪ್ಪ ಅವರು ನಂತರ ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಮುಂತಾದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.