ರಾಜ್ಯ

ಬೀದರ್: ಪೋಷಿಸಲಾಗದೆ 3 ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಕ್ಕಳನ್ನು ಪೋಷಿಸಲಾಗದೆ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಚನಕ ಘಟನೆ ಚಿಕ್ಕನಾಂಗಾವ್ ತಾಂಡಾದಲ್ಲಿ ನಡೆದಿದೆ...

ಬೀದರ್: ಪೋಷಿಸಲಾಗದೆ 3 ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ
ಆತ್ಮಹತ್ಯೆ
Published On :

ಬಸವಕಲ್ಯಾಣ: ತನ್ನ ಮಕ್ಕಳನ್ನು ಪೋಷಿಸಲಾಗದ ತಾಯಿ ಅವರನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಚಿಕ್ಕನಾಂಗಾವ್ ತಾಂಡಾದಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಿಕ್ಕನಾಂಗಾವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳಾದ 11 ವರ್ಷದ ಹೆಣ್ಣುಮಗು ಪಾಯನ್, 8 ವರ್ಷದ ಶಿಲ್ಪಾ ಹಾಗೂ 6 ವರ್ಷದ ಶಾಲಿನಿಯನ್ನು ಕತ್ತು ಹಿಸುಕಿ ಕೊಂದು 32 ವರ್ಷದ ಶೀಲಾಬಾಯಿ ಚೌಹಾಣ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಪತಿ ರಾಮ್ ಚೌಹಾಣ್ ನಿಧನ ಹೊಂದಿದ್ದರಿಂದ ಮಕ್ಕಳನ್ನು ಪೋಷಿಸಲಾಗದೆ ಶೀಲಾಬಾಯಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮುಡಬಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.