ಬೆಂಗಳೂರಿನಲ್ಲಿ ಜೋಡಿ ಕೊಲೆ ಪ್ರಕರಣ: ಆರೋಪಿ ಬಂಧನ
ಕಳೆದ ಎರಡು ದಿನಗಳ ಹಿಂದೆ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ರಸ್ತೆಯಲ್ಲಿ ನಡೆದ ವೃದ್ಧ ದಂಪತಿ ಪರ್ವತರಾಜ್(60) ಹಾಗೂ ಚಂದ್ರಕಲಾ(55) ಕೊಲೆ...

Published On :
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ರಸ್ತೆಯಲ್ಲಿ ನಡೆದ ವೃದ್ಧ ದಂಪತಿ ಪರ್ವತರಾಜ್(60) ಹಾಗೂ ಚಂದ್ರಕಲಾ(55) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನ ಮಂಗಳವಾರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಯನ್ನು ಕೆ.ಜಿ.ಹಳ್ಳಿ ನಿವಾಸಿ ಪ್ರೇಮಚಂದ್ ಜೈನ್(35) ಎಂದು ಗುರುತಿಸಲಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಪ್ರೇಮಚಂದ್ ಕಳೆದ ಹದಿನೈದು ವರ್ಷದಿಂದ ದಂಪತಿಗೆ ಪರಿಚಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಚಂದ್ರಶೇಖರ್(36)ಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಂಪತಿ ಬಳಿ ಅಪಾರ ಪ್ರಮಾಣದ ಹಣ, ಆಭರಣ ಇರುವ ಬಗ್ಗೆ ತಿಳಿದಿದ್ದ ಆರೋಪಿ ಪ್ರೇಮಚಂದ್, ಆಗಾಗ ವೃದ್ಧ ದಂಪತಿಯಿಂದ ಸಾಲ ಪಡೆಯುತ್ತಿದ್ದ ಎನ್ನಲಾಗಿದೆ. ಏಪ್ರಿಲ್ 22ರಂದು ದಂಪತಿ ಮನೆಗೆ ತನ್ನ ಸ್ನೇಹಿತ ಚಂದ್ರಶೇಖರನೊಂದಿಗೆ ಹೋಗಿದ್ದ ಪ್ರೇಮ್ ಚಂದ್ 50 ಸಾವಿರ ಹಣ ಕೇಳಿದ್ದು, ಈ ವೇಳೆ ಪರ್ವತರಾಜ್ ಹಣ ನೀಡಲು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಗಳು ದಂಪತಿಯನ್ನು ಕೊಲೆಮಾಡಿದ್ದರು. ಈ ಸಂಬಂಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


