ರಾಜ್ಯ

ನವ ವಿವಾಹಿತನ ಆತ್ಮಹತ್ಯೆಗೆ ಕಾರಣವಾಯ್ತೇ ಮದುವೆಗೆ ಮಾಡಿದ್ದ ಸಾಲ!

ತನ್ನ ಮದುವೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೇ ನೊಂದ ನವ ವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ...

ನವ ವಿವಾಹಿತನ ಆತ್ಮಹತ್ಯೆಗೆ ಕಾರಣವಾಯ್ತೇ ಮದುವೆಗೆ ಮಾಡಿದ್ದ ಸಾಲ!
ಆತ್ಮಹತ್ಯೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ತನ್ನ ಮದುವೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೇ ನೊಂದ ನವ ವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ.

ಬನಶಂಕರಿ ಸಮೀಪದ ಕಾವೇರಿನಗರದಲ್ಲಿ ಸೋಮವಾರ ರಾತ್ರಿ ದೆಹಲಿ ಮೂಲದ ಅವ್ರಕಾ (31) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವ್ರಕಾ ಹೇರ್ ಕಟಿಂಗ್ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮೂಲತಃ ದೆಹಲಿ ಮೂಲದ ಅವ್ರಕಾ 3 ತಿಂಗಳ ಹಿಂದಷ್ಟೇ ಡಾರ್ಜಿಲಿಂಗ್ ಮೂಲದ ಶಾಂತಿ ಎಕ್ಕಾ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರ ಪತ್ನಿ ಕೂಡ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ ಅವ್ರಕಾ ತನ್ನ ಮದುವೆಗೆ ಓರ್ವ ಫೈನಾನ್ಷಿಯರ್ ನಿಂದ ಸಾಲ ಮಾಡಿದ್ದ. ಆದರೆ ಸಾಲವನ್ನು ತೀರಿಸಲಾಗಿರಲಿಲ್ಲ.  ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ.

ಇದಕ್ಕೂ ಮೊದಲು ದಂಪತಿಗಳ ನಡುವೆ ಮದುವೆಗಾಗಿ ಊರಿಗೆ ಹೋಗಿ ಬರುವ ವಿಚಾರದ ಸಂಬಂಧ ಜಗಳವಾಗಿತ್ತು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಪ್ರಸ್ತುತ ಪ್ರಕರಣ  ದಾಖಲಿಸಿಕೊಂಡಿರುವ ಬನಶಂಕರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.