ರಾಜ್ಯ

ಶಿವಮೊಗ್ಗ: ಮದುವೆಗೆ ನಿರಾಕರಿಸಿದ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ

ತನ್ನನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರಿನಿಗೆ ಸಾರ್ವಜನಿಕವಾಗಿಯೇ ಪ್ರೇಯಸಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ...

ಶಿವಮೊಗ್ಗ: ಮದುವೆಗೆ ನಿರಾಕರಿಸಿದ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ
ಗಾಯಗೊಂಡ ಸುಮಂತ್
Published On :
ಶಿವಮೊಗ್ಗ: ತನ್ನನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರಿನಿಗೆ ಸಾರ್ವಜನಿಕವಾಗಿಯೇ ಪ್ರೇಯಸಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.
ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮೇಘಾಶೆಟ್ಟಿ ಹಾಗೂ ಸುಮಂತ್ (22) ನಡುವೆ ಇಂದು ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ನಡುವೆ ಮಾತಿನ ಚಕಮಕಿ ನಡೆದಿತ್ತು. ನಂತರ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಪ್ರೇಯಸಿ ಚೂರಿಯಿಂದ ಇರಿದು ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿನಿಯಾಗಿರುವ ಮೇಘಾ ಶೆಟ್ಟಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡ ಪ್ರಿಯಕರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.