ಬಿಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ಹುದ್ದೆಯಿಂದ ದಕ್ಷ ಅಧಿಕಾರಿ ವಿಜಯ ಭಾಸ್ಕರ್ ಎತ್ತಂಗಡಿ
ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹುದ್ದೆಯಿಂದ ಐಎಎಸ್ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ...

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹುದ್ದೆಯಿಂದ ಐಎಎಸ್ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಜಯಭಾಸ್ಕರ್ ಅವರನ್ನು ಅರಣ್ಯ , ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ಕಳೆದ ವಾರವಷ್ಟೇ ವರ್ಗಾವಣೆ ಮಾಡಲಾಗಿತ್ತು. ನಂತರವೂ ಅವರನ್ನು ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾಗಿ ಮುಂದುವರಿಸಲಾಗಿತ್ತು.
ವಿಜಯಭಾಸ್ಕರ್ ಏಳು ತಿಂಗಳ ಹಿಂದೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಬೆಳಿಗ್ಗೆ 6 ಗಂಟೆಯಿಂದಲೇ ಕಚೇರಿಗಳಿಗೆ ಹಠಾತ್ ಭೇಟಿ ನೀಡುವ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿಸಿದ್ದರು.ಅನಧಿಕೃತ ಸಂಪರ್ಕಗಳ ವಿರುದ್ಧ ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ನೀರಿನ ಶುಲ್ಕ ಬಾಕಿ ವಸೂಲಾತಿ ಆಂದೋಲನವನ್ನೂ ಶುರು ಮಾಡಿದ್ದರು. ಇದರಿಂದಾಗಿ ಮೂರು ತಿಂಗಳ ಅವಧಿಯಲ್ಲಿ ರು. 50 ಕೋಟಿಗೂ ಅಧಿಕ ಬಾಕಿ ವಸೂಲಿ ಆಗಿತ್ತು.
‘ಜಲಮಂಡಳಿ ಅಧ್ಯಕ್ಷರಾಗಿದ್ದ ವಿಜಯಭಾಸ್ಕರ್ ಹಾಗೂ ಬಿಬಿ ಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮಥಾಯಿ ಅವರ ವರ್ಗಾವಣೆಯಲ್ಲಿ ನನ್ನ ಪಾತ್ರ ಇಲ್ಲ. ವಿಜಯಭಾಸ್ಕರ್ ಅವರು ಉತ್ತಮ ಅಧಿಕಾರಿ. ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರಿಗೆ ಜಲಮಂಡಳಿ ಅಧ್ಯಕ್ಷರ ಹೊಣೆ ವಹಿಸಲಾಗಿದೆ. ಮಹೇಂದ್ರ ಜೈನ್ ಅವರು ಶನಿವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮಂಡಳಿಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


