ಕೆಪಿಎಸ್ ಸಿ ಹುದ್ದೆಗಳ ಸಂದರ್ಶನಕ್ಕೆ ಅರ್ಹರ ಪಟ್ಟಿ ಪ್ರಕಟ: ಸಂದರ್ಶನ ವಿಳಂಬ ಸಾಧ್ಯತೆ
ಕರ್ನಾಟಕ ಲೋಕಾ ಸೇವಾ ಆಯೋಗ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಸಂದರ್ಶನಕ್ಕೆ...

Published On :
ಬೆಂಗಳೂರು: ಕರ್ನಾಟಕ ಲೋಕಾ ಸೇವಾ ಆಯೋಗ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
464 ಗೆಜೆಟೆಡ್ ಪ್ರೊಬೇಷನರಿ ಹುದ್ದಗಳ ಸಂದರ್ಶನಕ್ಕೆ 1,389 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಹುದ್ದೆಗಳ ನೇಮಕಾತಿಗೆ 2014ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಾಥಮಿಕ ಪರೀಕ್ಷೆ ಕಳೆದ ಏಪ್ರಿಲ್ ನಲ್ಲಿ ನಡೆದಿತ್ತು. ಅದರಲ್ಲಿ ಆಯ್ಕೆಯಾದ 7,884 ಅಭ್ಯರ್ಥಿಗಳಿಗೆ ಕಳೆದ ಸೆಪ್ಟೆಂಬರ್ ನಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು.
ಸಂದರ್ಶನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಂದರ್ಶನ ನಡೆಸುವವರ ಬಗ್ಗೆ ಅಭ್ಯರ್ಥಿಗಳಿಂದ ಆಕ್ಷೇಪ ಕೇಳಿಬರುತ್ತಿದೆ. 2011ರಲ್ಲಿ 362 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 300 ಕೋಟಿ ರೂ.ಗಳಿಗೂ ಹೆಚ್ಚಿನ ಅಕ್ರಮ ನಡೆದಿರುವುದನ್ನು ಸಿಐಡಿ ಪತ್ತೆ ಹಚ್ಚಿ, ಕೆಪಿಎಸ್ಸಿಯಲ್ಲಿದ್ದಎಲ್ಲ ಸದಸ್ಯರು ಅಕ್ರಮದಲ್ಲಿ ಭಾಗಿಯಾಗಿರಬಹುದೆಂದು ವರದಿಯಲ್ಲಿ ತಿಳಿಸಿತ್ತು. ಸಿಐಡಿ ತನಿಖಾ ವರದಿಯ ಆಧಾರದಲ್ಲಿ ಕಳಂಕಿತರಾಗಿ ರುವ ಸದಸ್ಯರನ್ನಿಟ್ಟುಕೊಂಡು ಸಂದರ್ಶನ ನಡೆಸುವ ಗೊಂದಲಗಳು ಎದುರಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


