ಬಾಲಕನ ಮೇಲೆ ಸಿಐಎಸ್‌ಎಫ್ ಯೋಧನ ದರ್ಪ
ಬೇಸಿಗೆ ಝಳ ತಾಳಲಾರದೇ ಹೊಂಡದಲ್ಲಿ ಈಜಲು ಹೋದ ಬಾಲಕರೊಂದಿಗೆ ಸಿಐಎಸ್‌ಎಫ್ ಸಿಬ್ಬಂದಿಯೊಬ್ಬ ಅಮಾನವೀಯವಾಗಿ ವರ್ತಿಸಿದ್ದು, ಆತನ ಬೆನ್ನ ಮೇಲೆ ಕಾಲಿಟ್ಟು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ..

ವಿಜಯಪುರ: ಬೇಸಿಗೆ ಝಳ ತಾಳಲಾರದೇ ಹೊಂಡದಲ್ಲಿ ಈಜಲು ಹೋದ ಬಾಲಕರೊಂದಿಗೆ ಸಿಐಎಸ್‌ಎಫ್ ಸಿಬ್ಬಂದಿಯೊಬ್ಬ ಅಮಾನವೀಯವಾಗಿ ವರ್ತಿಸಿದ್ದು, ಆತನ ಬೆನ್ನ ಮೇಲೆ ಕಾಲಿಟ್ಟು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾನೆ.
ವಿಜಯಪುರ ಜಿಲ್ಲೆಯ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ (ಎನ್‌ಟಿಪಿಪಿ) ಹೊಂಡದಲ್ಲಿ ಭಾನುವಾರ ಕೆಲ ಬಾಲಕರು ಗುಂಪುಗೂಡಿ ಈಜಲು ಹೋಗಿದ್ದರು. ಇದನ್ನು ಕಂಡ ಸಿಬ್ಬಂದಿ ಬಾಲಕರನ್ನು ಹೊರ ಕರೆದು ಪುಶ್‌ಅಪ್ಸ್ ಮಾಡಲು ಹೇಳಿದ್ದಾನೆ. ಈ ವೇಳೆ ಬಾಲಕನ ಮೈ ಮೇಲೆ ಬೂಟುಗಾಲನ್ನು ಇಡುವ ಮೂಲಕ ಅಮಾನವೀಯತೆ ಮೆರೆದಿದ್ದಾನೆ. ಸ್ಥಳೀಯರೊಬ್ಬರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ವಾಟ್ಸಾಪ್‌ನಲ್ಲಿ ಹರಿಯ ಬಿಟ್ಟಿದ್ದಾರೆ.
ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಸಿಐಎಸ್ ಎಫ್ ಯೋಧನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಆ ಯೋಧನನ್ನು ಕೂಡಲೇ ಅಮಾನತು ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಆದರೆ ಈ ವರೆಗೂ ಘಟನೆ ಸಂಬಂಧ ಬಾಲಕರು ಯಾವುದೇ ದೂರು ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


