ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ ಪ್ರಿಯತಮೆ ಹತ್ಯೆ
ಪ್ರೀತಿ ಹೆಸರಲ್ಲಿ 19ರ ಹರೆಯದ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ...

ಗೌರಿಬಿದನೂರು: ಪ್ರೀತಿ ಹೆಸರಲ್ಲಿ 19ರ ಹರೆಯದ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ ಕೊಲೆ ಮಾಡಿರುವ ಘಟನೆ ನಡೆದಿದೆ.
ನರೇಶ್ ಎಂಬಾತ ಪ್ರಿಯತಮೆ 19 ವರ್ಷದ ಗೀತಾಳನ್ನು ಕಳೆದ ಆರು ತಿಂಗಳಿನಿಂದ ಪ್ರೀತಿಸುತ್ತಿದ್ದ, ಜತೆಗೆ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳಸಿದ್ದು ಆಕೆ ಗರ್ಭದರಿಸಿದ್ದಾಳೆ. ಇದರಿಂದ ಗಾಬರಿಗೊಂಡ ನರೇಶ್ ಆಕೆಗೆ ಗರ್ಭಪಾತ ಮಾತ್ರೆಗೆ ಬದಲಿಗೆ ವಿಷದ ಮಾತ್ರೆ ನೀಡಿದ್ದಾನೆ. ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಗೀತಾಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.
ಗೀತಾಳ ಸಾವಿಗೆ ನರೇಶ್ ಕಾರಣ ಎಂದು ಪೋಷಕರು ಆರೋಪಿಸಿ ಆತನ ಮನೆ ಎದುರು ಶವವಿಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗೌರಿ ಬಿದನೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


