ರಾಜ್ಯ

ಚಿಕ್ಕಮಗಳೂರು: ಶಾಲಾ ಬಸ್ ಪಲ್ಟಿ, ಓರ್ವ ಬಾಲಕ ಸ್ಥಳದಲ್ಲೇ ಸಾವು

ಖಾಸಗಿ ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಮತ್ತು 10ಕ್ಕೂ ಹೆಚ್ಚು ಮಕ್ಕಳು ...

ಚಿಕ್ಕಮಗಳೂರು: ಶಾಲಾ ಬಸ್ ಪಲ್ಟಿ, ಓರ್ವ ಬಾಲಕ ಸ್ಥಳದಲ್ಲೇ ಸಾವು
ಪಲ್ಟಿಯಾದ ಬಸ್
Published On :
ಚಿಕ್ಕಮಗಳೂರು: ಖಾಸಗಿ ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಮತ್ತು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಬಳಿಯ ನಾರಾಯಣಪುರ ಗೇಟ್‌‌ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಪ್ರೀತಂ (4) ಎಂದು ಗುರುತಿಸಲಾಗಿದೆ. ಈತ ಹಿರೇನಲ್ಲೂರಿನ ಪ್ರಮೋದ್ ಎಂಬುವರ ಮಗನಾಗಿದ್ದಾನೆ. ಬಸ್‌ನಲ್ಲಿ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಯಾಣ ಮಾಡುತ್ತಿದ್ದರು. ಘಟನೆಯಿಂದ 15ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. 
ಮೂರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ತರೀಕೆರೆ ಮತ್ತು ಅಜ್ಜಂಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡ ಓರ್ವ ವಿದ್ಯಾರ್ಥಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.