ನೆಲಮಂಗಲ: ಹೋಂ ವರ್ಕ್ ಮಾಡದ್ದಕ್ಕೆ 9 ವರ್ಷದ ಬಾಲಕಿಗೆ ಬೆಲ್ಟ್ ನಿಂದ ಥಳಿಸಿದ ಶಿಕ್ಷಕಿ
ಹೋಂವರ್ಕ್ ಮಾಡದ ಕಾರಣ 9 ವರ್ಷದ ಬಾಲಕಿಗೆ ಶಿಕ್ಷಕಿಯೊಬ್ಬರು ಲೆದರ್ ಬೆಲ್ಟ್ ನಿಂದ ಬಾಸುಂಡೆ ಬರುವ ಹಾಗೆ ಥಳಿಸಿರುವ ಘಟನೆ ಬೆಂಗಳೂರಿನ ..

ಬೆಂಗಳೂರು: ಹೋಂವರ್ಕ್ ಮಾಡದ ಕಾರಣ 9 ವರ್ಷದ ಬಾಲಕಿಗೆ ಶಿಕ್ಷಕಿಯೊಬ್ಬರು ಲೆದರ್ ಬೆಲ್ಟ್ ನಿಂದ ಬಾಸುಂಡೆ ಬರುವ ಹಾಗೆ ಥಳಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ವೆಂಕಟೇಶ್ ಹಾಗೂ ಆಶಾ ಎಂಬುವವರು ನೆಲಮಂಗಲ ಪಟ್ಟಣದ ಬಿನ್ನಮಂಗಲದಲ್ಲಿ ವಾಸವಾಗಿದ್ದು, 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳನ್ನು ಮನೆ ಟ್ಯೂಷನ್‌ಗೆ ಹಾಕಿದ್ದರು. ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಹಿನ್ನೆಲೆಯಲ್ಲಿ ಶಿಕ್ಷಕಿ ಲತಾ ಬೆಲ್ಟ್‌ನಿಂದ ಬೆನ್ನಿಗೆ ಹಾಗೂ ಕಿವಿಯ ಹಿಂಭಾಗ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.
ಈ ಶಿಕ್ಷಕಿ ಮನೆ ಪಾಠ ಮಾಡುವುದಕ್ಕಾಗಿ ಒಂದು ವರ್ಷಕ್ಕೆ ಹತ್ತು ಸಾವಿರ ರೂ.ನಂತೆ ಹಣ ಪಡೆದು ಮಕ್ಕಳಿಗೆ ಪಾಠ ಹೇಳಿ ಕೊಡುತ್ತಾರೆ. ಆದರೆ ಥಳಿತಕ್ಕೊಳಗಾದ ವಿದ್ಯಾರ್ಥಿನಿ ಸರಿಯಾಗಿ ಹೋಂ ವರ್ಕ್ ಮಾಡದಿದ್ದಕ್ಕೆ ಹಲ್ಲೆ ನಡೆಸಿರುವುದಾಗಿ ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.
ಟ್ಯೂಷನ್‌ನಿಂದ ಮಗುವನ್ನು ಮನೆಗೆ ಕರೆದುಕೊಂಡು ಹೋದ ಬಳಿಕ ನೋವನ್ನು ತಾಳಲಾರದ ಮಗು ಗಾಯಗಳನ್ನು ಪೋಷಕರಿಗೆ ತೋರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಮಗುವಿನ ಪೋಷಕರು ತಡರಾತ್ರಿಯೇ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಹಿಂದೆಯೂ ಹಲವು ವಿದ್ಯಾರ್ಥಿಗಳಿಗೆ ಶಿಕ್ಷಕಿ ಹೀಗೆಯೇ ಹಲ್ಲೆ ನಡೆಸಿದ್ದಾರೆ. ಆದರೆ ಯಾವೊಬ್ಬ ವಿದ್ಯಾರ್ಥಿಯೂ ಈ ವಿಷಯವನ್ನು ಬಹಿರಂಗ ಪಡಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


