ಮೈಸೂರು ದಸರಾ-2016ಕ್ಕೆ ಖ್ಯಾತ ಕವಿ ಚೆನ್ನವೀರ ಕಣವಿ ಚಾಲನೆ?
ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರಿಂದ ಚಾಲನೆ ನೀಡಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರಿಂದ ಚಾಲನೆ ನೀಡಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ಸೇರಿದ್ದ ಮೈಸೂರು ದಸರಾ ಸಮಿತಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಖ್ಯಾತ ಕವಿ ನಿಸಾರ್ ಅಹ್ಮದ್, ಎಸ್ ಎಲ್ ಬೈರಪ್ಪ, ಸುತ್ತೂರು ಮಠದ ಶ್ರೀಗಳಾದ ಶಿವರಾತ್ರಿ ದೇಶೀ ಕೇಂದ್ರ ಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅಥವಾ ಚೆನ್ನವೀರ ಕಣವಿ ಅವರಿಂದ ದಸರೆಗೆ ಉದ್ಧಾಟನೆ ಮಾಡಿಸುವ ಕುರಿತು ಪ್ರಸ್ತಾಪವಾಗಿತ್ತು. ಆದರೆ ಅಂತಿಮವಾಗಿ ದಸರಾ ಸಮಿತಿ ಚೆನ್ನವೀರಕಣವಿ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಲಾಗುತ್ತಿದೆ.
ಇದೇ ಮಂಗಳವಾರ ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ. ಇದೇ ಅಕ್ಟೋಬರ್ 1ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


