ರಾಜ್ಯ

ಪ್ರಧಾನಿಗೆ ಪತ್ರ ಬರೆದ ಕರ್ನಾಟಕದ ಗೋ ರಕ್ಷಾ ದಳ

ಕರ್ನಾಟದ ಗೋ ರಕ್ಷಾ ದಳ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಗೋಹತ್ಯೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದೆ.

ಪ್ರಧಾನಿಗೆ ಪತ್ರ ಬರೆದ ಕರ್ನಾಟಕದ ಗೋ ರಕ್ಷಾ ದಳ
ನರೇಂದ್ರ ಮೋದಿ
Published On :

ನವದೆಹಲಿ: ಕರ್ನಾಟದ ಗೋರಕ್ಷಾ ದಳ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಗೋಹತ್ಯೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದೆ.

ಮಾಧ್ಯಮ ವರದಿಯೊಂದರ ಪ್ರಕಾರ, ಹಿಂದೂ ರಾಷ್ಟ್ರೀಯ ಸಂಘಟನೆ ಪ್ರಧಾನಿಗೆ ಗೋ ರಕ್ಷಣೆ ಬಗ್ಗೆ ಪತ್ರ ಬರೆದಿದ್ದು, ಗೋಹತ್ಯೆಗೆ ವಿಧಿಸಲಾಗುವ ಶಿಕ್ಷೆಯನ್ನು ಕಠಿಣಗೊಳಿಸಬೇಕೆಂದು ಮನವಿ ಮಾಡಿದ್ದು ಕೇಂದ್ರ ಸರ್ಕಾರ ಗೋಹತ್ಯಾ ನಿಷೇಧ ಜಾರಿ ಮಾಡಬೇಕು ಎಂದು ಒತ್ತಾಯಿಸಿದೆ. ಪ್ರಧಾನಿ ನರೇಂದ್ರ ಮೋದಿ ತಮಗೆ ಸ್ವಯಂ ಘೋಷಿತ ಗೋ ರಕ್ಷಕರ ಬಗ್ಗೆ ಅಸಮಾಧಾನವಿದೆ ಎಂದು ಹೇಳಿದ ಬೆನ್ನಲ್ಲೇ ಕರ್ನಾಟಕದ ಗೋ ರಕ್ಷಾ ದಳ ಪ್ರಧಾನಿಗೆ ಪತ್ರ ಬರೆದಿದೆ. ಸ್ವಯಂ ಘೋಷಿತ ಗೋ ರಕ್ಷಕರ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ನಲ್ಲಿ  ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.