ಬೆಂಗಳೂರು: ಟೆಕ್ಕಿ ಅನುಮಾನಾಸ್ಪದ ಸಾವು, ಪರ್ಸ್ ಫೋನ್ ನಾಪತ್ತೆ
ಕಾಡುಗೋಡಿಯ ಅಪಾರ್ಟ್ಮೆಂಟ್ನಲ್ಲಿ ಟೆಕ್ಕಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಸೋಹನ್ಕುಮಾರ್ ಹಲ್ದಾರ್(35)ಮೃತ...

ಬೆಂಗಳೂರು: ಕಾಡುಗೋಡಿಯ ಅಪಾರ್ಟ್ಮೆಂಟ್ನಲ್ಲಿ ಟೆಕ್ಕಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಸೋಹನ್ಕುಮಾರ್ ಹಲ್ದಾರ್(35)ಮೃತ ಟೆಕ್ಕಿ.
ಕಾಡುಗುಡಿಯ ಪ್ರೆಸ್ಟೀಜ್ ಶಾಂತಿನಿಕೇತನ ಅಪಾರ್ಟ್ ಮೆಂಟ್ನ ಫ್ಲಾಟ್ನಲ್ಲಿ ನೆಲೆಸಿದ್ದ. ಫ್ಲ್ಯಾಟ್ನಲ್ಲಿ 4 ಕೊಠಡಿಗಳಿದ್ದು, ಒಂದರಲ್ಲಿ ಸೋಹನ್ ನೆಲೆಸಿದ್ದು, ಉಳಿದ ಮೂರರಲ್ಲಿ ಸ್ನೇಹಿತರು ವಾಸವಾಗಿದ್ದರು. ಕಳೆದ 2 ದಿನಗಳಿಂದ ಸೋಹನ್ ಕೆಲಸಕ್ಕೆ ಹೋಗಿರಲಿಲ್ಲ. ಮೊಬೈಲ್ಗೆ ಕರೆ ಮಾಡಿದರೆ, ಸ್ವಿಚ್ ಆಫ್ ಎಂದು ಬರುತ್ತಿತ್ತು. ಇದರಿಂದ ಕಂಪನಿ ನೌಕರರು ಮನೆಗೆ ಬಂದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.
2 ದಿನಗಳ ಹಿಂದೆಯೇ ಮೃತಪಟ್ಟಿದ್ದು, ಶವ ವಾಸನೆ ಬರುತ್ತಿತ್ತು. ದೇಹದ ಮೇಲೆ ಗಾಯದ ಗುರುತುಗಳಿಲ್ಲ. ಕಾುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೊ ಅಥವಾ ಕಾಯಿಲೆಯಿಂದ ಮೃತಪಟ್ಟಿದ್ದಾರೋ ಎಂಬುದು ಮರಣೋತ್ತರ ಪರೀಕ್ಷೆ ವರದಿ ಬಳಿಕ ತಿಳಿಯಲಿದೆ. ಸೋಹನ್ ಮೃತ ಪಟ್ಟಿರುವ ಸ್ಥಳದಿಂದ ಆತನ ಫೋನ್ ಮತ್ತು ಪರ್ಸ್ ನಾಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


