ರಾಜ್ಯ

ಎಸಿಬಿಯಲ್ಲಿ ಅರ್ಜಿಗಳ ಪ್ರವಾಹ, ಬೆಂಗಳೂರು ಒಂದರಲ್ಲೇ 246 ಅರ್ಜಿ ಸಲ್ಲಿಕೆ

ಭ್ರಷ್ಟಾಚಾರ ನಿಗ್ರಹ ದಳ ರಚನೆಯಾದಾಗಿನಿಂದ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದೆ.

ಎಸಿಬಿಯಲ್ಲಿ ಅರ್ಜಿಗಳ ಪ್ರವಾಹ, ಬೆಂಗಳೂರು ಒಂದರಲ್ಲೇ 246 ಅರ್ಜಿ ಸಲ್ಲಿಕೆ
ಎಸಿಬಿಯಲ್ಲಿ ಅರ್ಜಿಗಳ ಪ್ರವಾಹ, ಬೆಂಗಳೂರು ಒಂದರಲ್ಲೇ 246 ಅರ್ಜಿ ಸಲ್ಲಿಕೆ
Published On :

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ರಚನೆಯಾದಾಗಿನಿಂದ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದ್ದು,  1016 ಅರ್ಜಿಗಳು ರಾಜ್ಯಾದ್ಯಂತ ಸಲ್ಲಿಕೆಯಾಗಿವೆ. ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಬಂಧಿಸಲಾಗಿದೆ. 
ಖನಿಜ ಭವನದಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸಿಬಿ ಪೊಲೀಸ್ ಠಾಣೆಯ ಉದ್ಘಾಟನೆ ವೇಳೆ ಈ ಮಾಹಿತಿ ದೊರೆತಿದ್ದು, ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬರುತ್ತಿರುವ ಅರ್ಜಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರವೊಂದರಲ್ಲೇ ಭ್ರಷ್ಟಾಚಾರ ನಿಗ್ರಹ ದಳಕ್ಕೆ 246 ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಸ್ವೀಕರಿಸಲಾಗಿರುವ ಅರ್ಜಿಗಳನ್ನು ಆಧರಿಸಿ 6 ಪ್ರಕರಣ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.