ರೈತ ಹೋರಾಟಗಾರರಿಗೆ ಜಾಮೀನು; ಧಾರವಾಡದಲ್ಲಿ ಸಂಭ್ರಮಾಚರಣೆ
ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೀಡಾಗಿದ್ದ ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತಿದ್ದಂತೆಯೇ ಧಾರವಾಡದಲ್ಲಿ ಸಂಬಂಧಿಕರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಧಾರವಾಡ: ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೀಡಾಗಿದ್ದ ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತಿದ್ದಂತೆಯೇ ಧಾರವಾಡದಲ್ಲಿ ಸಂಬಂಧಿಕರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಅತ್ತ ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೋರಾಟಗಾರರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಇತ್ತ, ಧಾರವಾಡದಲ್ಲಿ ರೈತಪರ ಸಂಘಟನೆಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಪ್ರಮುಖವಾಗಿ ಪ್ರತಿಭಟನೆ ಬಳಿಕ ನಡೆದ ಪೊಲೀಸ್ ಲಾಠಿ ಚಾರ್ಜ್ ನಿಂದ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನವಲಗುಂದ ತಾಲ್ಲೂಕಿನ ಯಮನೂರು ಗ್ರಾಮದಲ್ಲಿ ರೈತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ರೈತರ ಈ ಸಂಭ್ರಮಾಚರಣೆಯಲ್ಲಿ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇಂದು ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆಯೇ ನವಲಗುಂದ ಗ್ರಾಮಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರು ತಮ್ಮ ಬೆಂಬಲಿಗರಿಗೆ ಮತ್ತು ರೈತರಿಗೆ ಸಿಹಿ ತಿನ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


