ಸ್ವಾತಂತ್ರ್ಯ ದಿನದಂದು 284 ಕೈದಿಗಳಿಗೆ ಬಿಡುಗಡೆ ಭಾಗ್ಯ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸನ್ನಡತೆಯ ಆಧಾರದ ಮೇಲೆ 284 ಕೈದಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ...

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸನ್ನಡತೆಯ ಆಧಾರದ ಮೇಲೆ 284 ಕೈದಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶ ಆಧಾರದಂತೆ ಬಿಡುಗಡೆಗೊಳ್ಳುತ್ತಿರುವ 284 ಕೈದಿಗಳಲ್ಲಿ 48 ಮಹಿಳಾ ಕೈದಿಗಳು ಬಿಡುಗಡೆಗೊಳ್ಳುತ್ತಿದ್ದು, ನಗರದ ಕೇಂದ್ರೀಯ ಪರಪ್ಪನ ಅಗ್ರಹಾರದಲ್ಲಿ 120 ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ, ಸರ್ಕಾರದ ಆದೇಶದಂತೆಯೇ ಈಗಾಗಲೇ 14 ವರ್ಷಗಳ ಕಾಲ ಸೆರೆವಾಸ ಅನುಭವಿಸಿ ಸನ್ನಡತೆ ಪ್ರದರ್ಶಿಸಿರುವ ಕೈದಿಗಳ ಪಟ್ಟಿಯನ್ನು ಕಾರಾಗೃಹ ಸರ್ಕಾರಕ್ಕೆ ಸಲ್ಲಿಸಿದೆ. ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆಯೇ ಕೈದಿಗಳ ಬಿಡುಗಡೆ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಸೋಮವಾರ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಹೊಸ ಮಾರ್ಗಸೂಚಿಯಲ್ಲೇನಿದೆ...?
ಸುಪ್ರೀಂಕೋರ್ಟ್ ನಿರ್ದೇಶನದಂತೆಯೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ರಚಿಸಿದ್ದು, ಇದರಂತೆ ಭಾರತೀಯ ದಂಡ ಸಂಹಿತೆಯ ಪರಿಚ್ಛೇಧ 433ಎ ಅನ್ವಯ 14 ವರ್ಷಗಳ ಕಾಲ ಜೀವಾವಧಿ ಶಿಕ್ಷೆ ಪೂರ್ಣಗೊಳಿಸಿರುವ ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಲು ಪರಿಗಣಿಸಬಹುದಾಗಿದೆ. ಇದರಂತೆ ಮಹಿಳಾ ಕೈದಿಗಳು 10 ವರ್ಷಗಳ ಕಾಲ ಕಾರಾಗೃಹ ವಾಸವನ್ನು ಪೂರ್ಣಗೊಳಿಸಿದ್ದಲ್ಲಿ ಅಂತಹ ಕೈದಿಗಳನ್ನು ಬಿಡುಗಡೆ ಮಾಡಬಹುದಾಗಿದೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವ ಕೈದಿಗಳಿಗೆ ಈ ಭಾಗ್ಯ ಲಭಿಸುವುದಿಲ್ಲ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


