ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಿಐಡಿ ತನಿಖೆಗೆ
ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ...

ಉಡುಪಿ: ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಈಗಾಗಲೇ ಅವರ ಪತ್ನಿ ರಾಜೇಶ್ವರಿ, ಮಗ ನವನೀತ್ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಎಂಬುವರನ್ನು ಬಂಧಿಸಿದ್ದಾರೆ. ಈ ಸಂಬಂಧ ನಿನ್ನೆ ಮಧ್ಯಾಹ್ನ ಬೆಂಗಳೂರಿನ ಗೃಹ ಇಲಾಖೆಯಿಂದ ಕರೆ ಬಂದಿತ್ತು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಸುತ್ತೊಲೆ ಹೊರಡಿಸಲಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಪ್ರಕರಣದ ತನಿಖೆಗೆ ಹೊಸ ತನಿಖಾಧಿಕಾರಿಯನ್ನು ನೇಮಿಸಲಾಗಿದೆ. ಆದರೆ ಸಿಐಡಿಯ ಯಾವ ಘಟಕ ತನಿಖೆ ನಡೆಸಲಿದೆ ಎಂಬುದು ಇನ್ನೂ ತಿಳಿದಿಲ್ಲ.
ಸ್ಥಳೀಯ ಪೊಲೀಸರು ನಡೆಸುತ್ತಿರುವ ತನಿಖೆ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ತನಿಖೆ ನಿಷ್ಪಕ್ಷಪಾತ ರೀತಿಯಲ್ಲಿ ನಡೆಯಬೇಕೆಂದು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಜಿಲ್ಲಾ ಎಸ್ ಪಿ ತಿಳಿಸಿದ್ದಾರೆ.
ತನಿಖಾ ತಂಡಗಳು ಈಗಾಗಲೇ ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ ಹಾಗೂ ಉಡುಪಿ ಎಸ್ಪಿ ಕೆ.ಟಿ.ಬಾಲಕೃಷ್ಣ ಅವರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿವೆ, ಶೀಘ್ರದಲ್ಲೇ ತನಿಖಾಧಿಕಾರಿ ಆಗಮಿಸಿ ತನಿಖೆ ಮುಂದುವರಿಸಲಿದ್ದಾರೆ. .
ಜುಲೈ 28ರಂದು ಅವರನ್ನು ಹತ್ಯೆಗೈದಿದ್ದ ಆರೋಪಿಗಳು, ಯಜ್ಞಕುಂಡದಲ್ಲೇ ಶವ ಸುಟ್ಟಿದ್ದರು ಎನ್ನಲಾಗಿದೆ.ಪೊಲೀಸರು ಆರೋಪಿಗಳಿಗೆ ವಿಶೇಷ ಆತಿಥ್ಯ ನೀಡುತ್ತಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲವರನ್ನು ಬಂಧಿಸದೆ ಬಿಟ್ಟಿದ್ದಾರೆ. ಹೀಗಾಗಿ, ನ್ಯಾಯಯುತ ತನಿಖೆಯಾಗಬೇಕು’ ಎಂದು ಆಗ್ರಹಿಸಿ ಕೆಲ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್‌ರಿಗೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


