ಬಿಜೆಪಿ ಕಾರ್ಯಕರ್ತನ ಹತ್ಯೆ: ಗೋರಕ್ಷಕನ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
ಗೋವುಗಳ ರಕ್ಷಣೆ ಹೆಸರಿನಲ್ಲಿ ಪ್ರವೀಣ್ ಪೂಜಾರಿಯವರನ್ನು ಹತ್ಯೆ ಮಾಡಿದ ಗೋರಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಸಮಿತಿ...

ಮಂಗಳೂರು: ಗೋವುಗಳ ರಕ್ಷಣೆ ಹೆಸರಿನಲ್ಲಿ ಪ್ರವೀಣ್ ಪೂಜಾರಿಯವರನ್ನು ಹತ್ಯೆ ಮಾಡಿದ ಗೋರಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಸಮಿತಿ ಶುಕ್ರವಾರ ಆಗ್ರಹಿಸಿದೆ.
ಈ ಕುರಿತಂತೆ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೊಡಿಜಾಲ್ ಇಬ್ರಾಹಿಂ ಅವರು, ಗೋ ಸಾಗಾಣಿಕೆ ಮಾಡುತ್ತಿದ್ದಾರೆಂದು ಜನರ ಮೇಲೆ ಹಲ್ಲೆ ಮಾಡುವುದು ಪ್ರಜಾಪ್ರಭುತ್ವದ ವಿರುದ್ಧವಾದದ್ದು. ಕೆಲ ಬಿಜೆಪಿ ನಾಯಕರು ಸಾರ್ವಜನಿಕ ಸಭೆಗಳಲ್ಲಿ ಪ್ರಚೋದನಾಕಾರಿಯಾಗಿ ಭಾಷಣಗಳನ್ನು ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ಕೆಲ ಕ್ರಿಮಿನಲ್ ಗಳಿಗೆ ಹಿಂದೂ ಪರ ಸಂಘಟನೆಗಳು ಬೆಂಬಲ ನೀಡುತ್ತಿರುವುದು ಹಲವು ಪ್ರಕರಣಗಳಲ್ಲಿ ಸಾಬೀತಾಗಿದೆ. ಮುಸ್ಲಿಮರು ಹಾಗೂ ದಲಿತರ ಮೇಲೆ ರಾಜಕೀಯ ನಾಯಕರು ದಾಳಿ ಮಾಡುತ್ತಿದ್ದಾರೆ. ಇಂತಹವರಿಂದಾಗಿ ಪ್ರವೀಣ್ ಪೂಜಾರಿ ಬಲಿಯಾದರು. ಪ್ರವೀಣ್ ನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


