ರಾಜ್ಯ

ಜಾಧವ್ ಭೂಕಬಳಿಕೆ ಪ್ರಕರಣ; ಬೆಂಗಳೂರು ನಗರ ಡಿಸಿಗೆ ಎಸಿಬಿ ನೋಟಿಸ್

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ...

ಜಾಧವ್ ಭೂಕಬಳಿಕೆ ಪ್ರಕರಣ; ಬೆಂಗಳೂರು ನಗರ ಡಿಸಿಗೆ ಎಸಿಬಿ ನೋಟಿಸ್
ಅರವಿಂದ್ ಜಾಧವ್
Published On :
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಅವರಿಗೆ ಎಸಿಬಿ ಅಧಿಕಾರಿಗಳು ಬುಧವಾರ ನೋಟಿಸ್ ಜಾರಿ ಮಾಡಿದ್ದಾರೆ.
ಅರವಿಂದ್ ಜಾದವ್ ಅವರ ತಾಯಿ ತಾರಾಭಾಯ್ ಅವರಿಗೆ ಸೇರಿದ ಭೂ ದಾಖಲೆಗಳ ವಿವರ ನೀಡುವಂತೆ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿ ಶಂಕರ್ ಅವರಿಗೆ ನೋಟಿಸ್ ನೀಡಿದ್ದಾರೆ.
ಜಾಧವ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ತಾಯಿ ತಾರಾಭಾಯ್ ಹೆಸರಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ನಿನ್ನೆ ಆರ್ ಟಿ ಐ ಕಾರ್ಯಕರ್ತ ಎಸ್.ಭಾಸ್ಕರನ್ ಅವರು ಎಸಿಬಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಇಂದು ಡಿಸಿಗೆ ನೋಟಿಸ್ ಜಾರಿ ಮಾಡಿದೆ.
ಇನ್ನು ತಮ್ಮ ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿರುವ ಜಾಧವ್ ಅವರು, 
ಭೂಮಿ ಖರೀದಿಗೆ ಸಂಬಂಧಿಸಿದಂತೆ ಕಾನೂನು ಉಲ್ಲಂಘನೆಯಾಗಲಿ, ಅಕ್ರಮವಾಗಲಿ ನಡೆದಿಲ್ಲ. ನನ್ನ ತಾಯಿ ಊರಿನಲ್ಲಿದ್ದ ತಮ್ಮ ಜಮೀನು ಮಾರಿ ಬೆಂಗಳೂರಿನಲ್ಲಿ ಜಮೀನು ಖರೀದಿಸಿದ್ದರು. ಆ ಭೂಮಿ ಖರೀದಿ ವೇಳೆ ಸರ್ಕಾರಿ ಭೂಮಿ ಆಗಿರಲಿಲ್ಲ. ಅಲ್ಲದೇ ನನ್ನ ತಾಯಿ ಭೂಮಿ ಖರೀದಿಸುವ ವೇಳೆ ನಾನು ಕೇಂದ್ರದ ಸೇವೆಯಲ್ಲಿದ್ದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.