ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಸಹೋದರರ ಮೇಲೆ ಹಲ್ಲೆ: ಓರ್ವ ಸಾವು, ಇಬ್ಬರಿಗೆ ತೀವ್ರ ಗಾಯ
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರರ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿ ಮತ್ತಿಬ್ಬರು ತೀವ್ರವಾಗಿ..

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರರ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗೋಪನಕೊಪ್ಪದ ಅಮರ ಕಾಲೋನಿಯಲ್ಲಿ ನಡೆದಿದೆ.
ಬುಧವಾರ ಮಧ್ಯರಾತ್ರಿ ತೌಸಿಫ್ ಕರಡಿ ಎನ್ನುವರ ಮನೆ ಮೇಲೆ ದಾಳಿ ಮಾಡಿದ ಎಂಟರಿಂದ ಹತ್ತು ಜನರಿದ್ದ ತಂಡ ತಲ್ವಾರ್ ಹಾಗೂ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ ಎನ್ನಲಾಗಿದೆ.
ತೌಸಿಫ್ ಮೇಲೆ ಹಲ್ಲೆ ಮಾಡುತ್ತಿರುವುದನ್ನು ನೋಡಿದ ಸಹೋದರರಾದ ಆಜಾದ್ ಮತ್ತು ವಾಸೀಂ ಬಿಡಿಸಲು ಹೋಗಿದ್ದಾರೆ. ಆಗ ಅವರ ಮೇಲೆಯೂ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಸಹೋದರರು ಗಂಭೀರವಾಗಿ ಗಾಯಗೊಂಡಿದ್ದರೆ, ತೌಸಿಫ್ ಬೆಳಗಾವಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯ ಕೊನೆಯುಸಿರೆಳೆದಿದ್ದಾನೆ.
ಇನ್ನು ತೀವ್ರವಾಗಿ ಗಾಯಗೊಂಡಿರುವ ವಾಸೀಂನನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇನ್ನೊಬ್ಬ ಸಹೋದರ ಆಜಾದ್‌ಗೆ ಹುಬ್ಬಳ್ಳಿಯಲ್ಲಿ ಕಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗುತ್ತಿದೆ. ಸದ್ದಾಂ, ಸೈಯದ್, ಇಸ್ಮಾಯಿಲ್, ಮೌಲಾಲಿ ಸೇರಿದಂತೆ 8ರಿಂದ 10 ಜನರ ಗುಂಪು ಈ ಮೂವರ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದೆ ಎನ್ನಲಾಗಿದೆ.
ಸದ್ದಾಂ ಹಾಗೂ ತೌಸಿಫ್ ಇಬ್ಬರು ಸಂಬಂಧಿಗಳಾಗಿದ್ದು ಪಾರಿವಾಳ ಹಾರಾಟ ಸ್ಪರ್ಧೆ ಸಂಬಂಧ ಇವರಿಬ್ಬರ ಕುಟುಂಬದ ನಡುವೆ ಹಳೇ ದ್ವೇಷವಿತ್ತು ಎನ್ನಲಾಗಿದೆ. ಅದಲ್ಲದೇ ಕೆಲ ದಿನಗಳ ಹಿಂದೆ ಈ ವೈಷಮ್ಯ ವಿಕೋಪಕ್ಕೆ ತಿರುಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


