ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿಯಿಂದ ಪ್ರಣಬ್ ಮೊಹಂತಿ ವಿಚಾರಣೆ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಲೋಕಾಯುಕ್ತ...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿಯಿಂದ ಪ್ರಣಬ್ ಮೊಹಂತಿ ವಿಚಾರಣೆ
ಪ್ರಣಬ್ ಮೊಹಂತಿ
Published On :
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಲೋಕಾಯುಕ್ತ ಐಜಿಪಿಯಾಗಿದ್ದ ಪ್ರಣಬ್ ಮೊಹಂತಿ ಅವರನ್ನು ಶನಿವಾರ ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದೆ.
ಬೆಂಗಳೂರಿನ ಚಾಲುಕ್ಯ ವೃತ್ತದ ಬಳಿ ಇರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ಇಂದು ಪ್ರಣಬ್ ಮೊಹಂತಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಎಡಿಜಿಪಿ ಸಿ.ಎಚ್. ಪ್ರತಾಪ್ ರೆಡ್ಡಿ ನೇತೃತ್ವದ ತಂಡ ಪ್ರಣಬ್ ಮೊಹಂತಿ ಅವರನ್ನು ಸುಮಾರು 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಯಾವಾಗಿನಿಂದ ಗಣಪತಿಯವರ ಪರಿಚಯವಿದೆ? ಲೋಕಾಯುಕ್ತದಲ್ಲಿನ ಕೇಸ್ ಗೆ ಸಂಬಂಧಿಸಿದಂತೆ ಅವರನ್ನು ಎಷ್ಟು ಬಾರಿ ವಿಚಾರಣೆ ನಡೆಸಿದ್ದೀರಿ? ಎಂಬ ಪ್ರಶ್ನೆಗಳು ಸೇರಿದಂತೆ ಸುಮಾರು 120ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ.
ಸಿಐಡಿಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿರುವ ಪ್ರಣಬ್ ಮೊಹಂತಿ ಅವರು, ಎಂ.ಕೆ.ಗಣಪತಿ ಆರೋಪಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಗಣಪತಿ ಅವರು ನನ್ನ ಕೈಕೆಳಗೆ ಯಾವತ್ತೂ ಕೆಲಸ ಮಾಡಿಲ್ಲ ಮತ್ತು ಅವರ ಅಮಾನತಿಗೂ ನನಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಮಂಗಳೂರು ಡಿವೈಎಸ್ಪಿ ಗಣಪತಿಯವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಖಾಸಗಿ ವಾಹನಿಯೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ನನಗೇನಾದರೂ ಆದರೆ  ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ. ಪ್ರಸಾದ್ ಮತ್ತು ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿಯವರೇ ನೇರಹೊಣೆಯಾಗಿರುತ್ತಾರೆಂದು ಹೇಳಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ಸಾಕಷ್ಟು ವಿವಾದ ಹಾಗೂ ಚರ್ಚೆಯನ್ನು ಹುಟ್ಟುಹಾಕಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.