ಕಬ್ಬನ್ ಪಾರ್ಕ್ ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ: ಆತಂಕಗೊಂಡ ಪ್ರಯಾಣಿಕರು
ನಗರದ ಕಬ್ಬನ್ ಪಾರ್ಕ್ ಬಳಿ ಇರುವ ಮೆಟ್ರೋ ಸುರಂಗ ಮಾರ್ಗದಲ್ಲಿ ಶನಿವಾರ ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ...

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಬಳಿ ಇರುವ ಮೆಟ್ರೋ ಸುರಂಗ ಮಾರ್ಗದಲ್ಲಿ ಶನಿವಾರ ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ನಡುವಿನ ಮಾರ್ಗದಲ್ಲಿರುವ ಮೆಟ್ರೋ ಸುರಂಗ ಮಾರ್ಗದಲ್ಲಿ ಇಂದು ಬೆಳಿಗ್ಗೆ 11.15ರ ಸುಮಾರಿಗೆ ಹೊಗೆ ಕಾಣಿಸಿಕೊಂಡಿದ್ದು, ಪರಿಣಾಮ ಆತಂಕಗೊಂಡ ಪ್ರಯಾಣಿಕರು ನಿಲ್ದಾಣದಿಂದ ಹೊರ ಓಡಿಬರುತ್ತಿರುವ ದೃಶ್ಯಗಳು ಕಂಡಿಬಂದಿತ್ತು.
ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಭದ್ರತಾ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ತಪಾಸಣೆ ನಂತರ ಸಿಬ್ಬಂದಿಗಳು ಸಮಸ್ಯೆಯನ್ನು ಬಗೆಹರಿಸಿದ್ದಾರೆಂದು ತಿಳಿದುಬಂದಿದೆ.
ಘಟನೆ ಕುರಿತಂತೆ ಮಾಹಿತಿ ನೀಡಿರುವ ಬಿಎಂಆರ್ ಸಿಎಲ್ ಅಧಿಕಾರಿಗಳು, ಘಟನೆ 11.15ರ ಸುಮಾರಿಗೆ ನಡೆದಿತ್ತು. ನಿಲ್ದಾಣದ ಒಳಭಾಗದಲ್ಲಿ ಹೊಗೆ ಆವರಿಸಿತ್ತು. ಸುಟ್ಟು ಹೋಗುತ್ತಿರುವ ವಾಸನೆ ಬರುತ್ತಿತ್ತು. ಪರಿಶೀಲನೆ ನಡೆಸಿದಾಗ ಕೇಬಲ್ ಗ್ಯಾಲರಿಯಲ್ಲಿ ದೋಷಗಳು ಕಂಡುಬಂದಿತ್ತು. ಮುಂಜಾಗ್ರತಾ ಕ್ರಮವಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು 10-15 ನಿಮಿಷಗಳ ಕಾಲ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಸ್ಥಳದಿಂದ ಪ್ರಯಾಣಿಕರನ್ನು ಹೊರಗೆ ಕಳುಹಿಸಿರಲಿಲ್ಲ. ಪ್ರಸ್ತುತ ಸಮಸ್ಯೆಯನ್ನು ಬಗೆಹರಿಸಿದ್ದು, ಆಂತಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


