ರಾಜ್ಯ

ಎಂ.ಎಂ. ಕಲಬುರ್ಗಿ ಹತ್ಯೆಯಾಗಿ 1 ವರ್ಷ: ಹಂತಕರ ಪತ್ತೆ ಇನ್ನೂ ನಿಗೂಢ

ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿಯವರ ಹತ್ಯೆಯಾಗಿ ಒಂದು ವರ್ಷ ಕಳೆದಿದ್ದರೂ, ಹಂತಕರ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ...

ಎಂ.ಎಂ. ಕಲಬುರ್ಗಿ ಹತ್ಯೆಯಾಗಿ 1 ವರ್ಷ: ಹಂತಕರ ಪತ್ತೆ ಇನ್ನೂ ನಿಗೂಢ
ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ
Published On :

ಧಾರವಾಡ: ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿಯವರ ಹತ್ಯೆಯಾಗಿ ಒಂದು ವರ್ಷ ಕಳೆದಿದ್ದರೂ, ಹಂತಕರ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ.

2015ರ ಆ.30 ರಂದು ಕಲ್ಯಾಣನಗರದಲ್ಲಿ ಡಾ.ಕಲಬುರ್ಗಿಯವರ ಹತ್ಯಾಯಾಗಿದ್ದು. ಘಟನೆ ನಡೆದ ಮರುದಿನವೇ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಹತ್ಯೆಯಾಗಿ ಸಾಕಷ್ಟು ಸಮಯವಾದರೂ ಹಂತಕರ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿ 22 ತಂಡಗಳನ್ನು ರಚಿಸಿತ್ತು. ಇದರಂತೆ 36ಕ್ಕೂ ಹೆಚ್ಚು ಅಧಿಕಾರಿಗಳು ಹಂತಕರಿಗಾಗಿ ಹುಡುಕಾಡುತ್ತಿದ್ದಾರೆ. ಆದರೆ, ಹತ್ಯೆಯಾಗಿ ಇಂದಿಗೆ ವರ್ಷ ಕಳೆದರೂ ಯಾವುದೇ ಸುಳಿವುಗಳು ಸಿಕ್ಕಲ್ಲ.

ಮಹಾರಾಷ್ಟ್ರದಲ್ಲಿ ಹತ್ಯೆಯಾದ ಡಾ.ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧಿರಾದ ಹಂತಕರೇ ಕಲಬುರ್ಗಿಯವರ್ನು ಹತ್ಯೆ ಮಾಡಿರಬಹುದು ಎಂಬ ಹಲವು ಸಂಶಯಗಳನ್ನು ಪೊಲೀಸರು ಈ ಹಿಂದೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದಾಬೋಲ್ಕರ್ ಹತ್ಯೆಯಲ್ಲಿ ಬಂಧಿತನಾಗಿರುವ ವಿರೇಂದ್ರ ತಾವಡೆಯನ್ನು ತಮಗೆ ಒಪ್ಪಿಸುವಂತೆ ಸಿಐಡಿ ಅಧಿಕಾರಿಗಳು ಸಿಬಿಐ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಸಿಬಿಐ ಅಧಿಕಾರಿಗಳು ಇದಕ್ಕೆ ಈ ವರೆಗೂ ಒಪ್ಪಿಗೆ ನೀಡಿಲ್ಲ. ಒಂದು ವೇಳೆ ಸಿಬಿಐ ಅಧಿಕಾರಿಗಳು ಗ್ನೀನ್ ಸಿಗ್ನಲ್ ನೀಡಿದ್ದೇ ಆದರೆ, ಈ ಬಗ್ಗೆ  ಮಾಹಿತಿ ಸಿಗಬಹುದೆಂದು ರಾಜ್ಯ ಪೊಲೀಸರು ನಂಬಿದ್ದಾರೆ.

ಪ್ರತಿಭಟನೆಗೆ ಮುಂದಾಗಿರುವ ಹಲವು ಸಂಘಟನೆಗಳು
ಕಲುಬುರ್ಗಿಯವರ ಹತ್ಯೆಯಾಗಿ ಒಂದು ವರ್ಷಗಳೂ ಕಳೆದಿದ್ದರೂ, ಹಂತಕರ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಸಂಘಟನೆಗಳು ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಕಲಬುರ್ಗಿಯವರ ನಿವಾಸ ಕಲ್ಯಾಣ ನಗರದಿಂದ ಕಾಲ್ನಡಿಗೆ ಮೂಲಕ ಪ್ರತಿಭಟನೆ ನಡೆಸಲು ಹಲವು ಸಂಘಟನೆಗಳು ತೀರ್ಮಾನಿಸಿದ್ದು, ಇಂದು ಬೆಳಿಗ್ಗೆಯಿಂದಲೇ ಪ್ರತಿಭಟನೆಗಳನ್ನು ಆರಂಭಿಸಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.