ನಟ ದರ್ಶನ್ ಮನೆ ತೆರವಿಲ್ಲ: ಯೂ ಟರ್ನ್ ಹೊಡೆದ ಸರ್ಕಾರ
ರಾಜರಾಜೇಶ್ವರಿ ನಗರ ವಲಯದ ಐಡಿಯಲ್ ಹೋಮ್ ಟೌನ್‌ಶಿಪ್‌ನಲ್ಲಿರುವ ಚಿತ್ರನಟ ದರ್ಶನ್ ಮನೆ ದಾಖಲಾತಿಗಳು ಸರಿಯಿದ್ದು ತೆರವುಗೊಳಿಸುವ ..

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯದ ಐಡಿಯಲ್ ಹೋಮ್ ಟೌನ್‌ಶಿಪ್‌ನಲ್ಲಿರುವ ಚಿತ್ರನಟ ದರ್ಶನ್ ಮನೆ ದಾಖಲಾತಿಗಳು ಸರಿಯಿದ್ದು ತೆರವುಗೊಳಿಸುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಯೂ ಟರ್ನ್ ಹೊಡೆದಿದೆ.
ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ರಾಜಕಾಲುವೆ ಮೇಲೆ ನಿರ್ಮಾಣಗೊಂಡಿದೆ ಎಂದು ಹೇಳಲಾಗಿತ್ತು. ಆದರೆ ಆ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು ಸರ್ಕಾರವೇ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೂಡ ಮನೆ ತೆರವು ಮಾಡಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಮಾತನಾಡಿದ ಅವರು ಮನೆ ಕಟ್ಟಿಕೊಳ್ಳುವಂತೆ ಸರ್ಕಾರವೇ ಅನುಮತಿ ನೀಡಿರುವುದರಿಂದ ದರ್ಶನ್ ತಮ್ಮ ದಾಖಲೆಗಳನ್ನು ಇಟ್ಟುಕೊಂಡು ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆಯಿದೆ. ದರ್ಶನ್ ಮನೆ ದಾಖಲಾತಿಗಳನ್ನು ತಹಶೀಲ್ದಾರ್ ಪರಿಶೀಲಿಸಿ ವರದಿ ನೀಡಿದ್ದಾರೆ. ಹೀಗಾಗಿ ದರ್ಶನ್ ಮನೆ ತೆರವುಗೊಳಿಸುತ್ತಿಲ್ಲ ಎಂದು ಜಯಚಂದ್ರ ಸ್ಪಷ್ಟನೆ ನೀಡಿದ್ದಾರೆ.
ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡವರು ಎಷ್ಟೇ ಪ್ರಭಾವಿಗಳಿದ್ದರೂ, ಮನೆಯನ್ನು ತೆರವುಗೊಳಿಸುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ದರ್ಶನ್ ಮನೆ ವಿಷಯದಲ್ಲಿ ಸರ್ಕಾರ ನೀಡಿದ್ದ ಹೇಳಿಕೆಯಿಂದ ನುಣುಚಿಕೊಂಡಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


