ಮಲೆಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಲಿದೆ 100 ಅಡಿ ಬೃಹತ್ ಶಿವನ ವಿಗ್ರಹ
ಮಲೆ ಮಹದೇಶ್ವರ ಬೆಟ್ಟದದಲ್ಲಿ 100 ಅಡಿಯ ಬೃಹತ್ ಈಶ್ವರನ ವಿಗ್ರಹ ನಿರ್ಮಾಣ ಮಾಡಲು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ...

ಮೈಸೂರು: ಮಲೆ ಮಹದೇಶ್ವರ ಬೆಟ್ಟದದಲ್ಲಿ 100 ಅಡಿಯ ಬೃಹತ್ ಈಶ್ವರನ ವಿಗ್ರಹ ನಿರ್ಮಾಣ ಮಾಡಲು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಸುಮಾರು 43 ಎಕರೆ ಭೂಮಿಯಲ್ಲಿ 100 ಅಡಿ ವಿಗ್ರಹ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಎಸ್ ಮಹದೇವಪ್ರಸಾದ್ ತಿಳಿಸಿದ್ದಾರೆ. ಬೆಟ್ಟದ ಮೇಲೆ ಕಂದಾಯ ಇಲಾಖೆಯ 43 ಎಕರೆ ಜಾಗದಲ್ಲಿ ವಿಗ್ರಹ ಸ್ಥಾಪಿಸಲಾಗುವುದು. ಈ ಹಿನ್ನೆಲೆಯಲ್ಲಿ 13 ಎಕರೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.
ಸುಮಾರು 21 ಕೋಟಿ ವೆಚ್ಚದಲ್ಲಿ ಈ ವಿಗ್ರಹವನ್ನು ಸಿಮೆಂಟ್ ನಲ್ಲಿ ನಿರ್ಮಾಣ ಮಾಡಲಾಗುತ್ತದೆ. ಭಕ್ತಾದಿಗಳು ಕೂಡ ವಿಗ್ರಹ ನಿರ್ಮಾಣಕ್ಕೆ ದೇಣಿಗೆ ನೀಡಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


